ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸದ್ಯಕ್ಕಿಲ್ಲ
ಬೆಂಗಳೂರು, ಮಾರ್ಚ್ 31: ಬಿಬಿಎಂಪಿ ಪ್ರತಿ ವರ್ಷ ಇತಿಹಾಸ ಪ್ರಸಿದ್ಧ ಕರಗ ಶಕ್ತ್ಯೋತ್ಸವ ದಿನದಂದೇ ಕೆಂಪೇಗೌಡ ದಿನಾಚರಣೆಯನ್ನು ಅದ್ಧೂರಿಯಿಂದ ಆಚರಣೆ ಮಾಡುತ್ತಿತ್ತು. ಆದರೆ, ಈ ಬಾರಿ ಚುನಾವಣಾ ನೀತಿ ಸಮಹಿತೆ ಜಾರಿ ಹಿನ್ನೆಲೆಯಲ್ಲಿ ಕರಗದ ದಿನದಂದು ಕೆಂಪೇಗೌಡ ಜಯಂತಿಯನ್ನು ಅಚರಣೆ ಮಾಡುತ್ತಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಕರಗದ ದಿನದಂದೇ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಪಾಲಿಕೆಯು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿತ್ತು. ಪ್ರಶಸ್ತಿಗಾಗಿ ಸಾಧಕರು ಸಹ ಅರ್ಜಿಗಳನ್ನು ಸಲ್ಲಿಸುತ್ತಿದ್ದರು. ಕೆಂಪೇಗೌಡ ದಿನಾಚರಣೆ ಅಂಗವಾಗಿ ಕಾರ್ಪೊರೇಟರ್ ಗಳಿಗಾಗಿ ನಾನಾ ಕ್ರೀಡಾ ಕೂಟವನ್ನು ಆಯೋಜಿಸಿ, ವಿಜೇತರನ್ನು ಆಯ್ಕೆ ಮಾಡಲಾಗಿದೆ.

ಈ ಸಲ ವಾರ್ಡ್ ಮಟ್ಟದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಬಜೆಟ್ ನಲ್ಲಿ 1.50ಲಕ್ಷ ರೂ ಮೀಸಲಿಡಲಾಗಿದೆ. ಆದರೆ ರಾಜ್ಯ ಸರ್ಕಾರವು ರಾಜ್ಯ ಮಟ್ಟದಲ್ಲಿ ಕಳೆದ ವರ್ಷದಿಂದ ಕೆಂಪೇಗೌಡ ಜಯಂತಿಯನ್ನು ಶುರು ಮಾಡಿದೆ. ಹೀಗಾಗಿ, ಸರ್ಕಾರ ಮತ್ತು ಬಿಬಿಎಂಪಿ ವತಿಯಿಂದ ಒಂದೇ ದಿನ ಜಯಂತಿ ಆಚರಣೆಗೆ ನಿರ್ಧರಿಸಲಾಗಿದೆ. ಚುನಾವಣೆ ಮುಗಿದ ಬಳಿಕ ಮೇ ತಿಂಗಳಿನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ.












Click it and Unblock the Notifications