ಬೆಂಗಳೂರು : ಶಿವಾಜಿನಗರ ಪೊಲೀಸರಿಂದ ಮೂವರು ಸರಗಳ್ಳರ ಬಂಧನ

ಬೆಂಗಳೂರು, ನವೆಂಬರ್ 12 : ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಇಬ್ರಾಹಿಂ, ಫಯಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 30 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸುತ್ತಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Three arrested on charges of chain snatching

ಬಂಧಿತರ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದವು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮೂವರನ್ನು ಬಂಧಿಸಲಾಗಿದೆ. ನಗರದ ತುಂಬಾ ಸಂಚಾರ ನಡೆಸುತ್ತಿದ್ದ ಆರೋಪಿಗಳು, ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದರು. ಇಂದಿನ ಚಿನ್ನದ ದರವೆಷ್ಟು?

ಆಗ್ನೇಯ ವಿಭಾಗದ ಪೊಲೀಸರು ನವೆಂಬರ್ 9ರಂದು ಸರಗಳ್ಳತನ ಮಾಡುವ ಭಾವರಿಯ ಗ್ಯಾಂಗ್‌ನ ಐವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಈ ಸಂದರ್ಭ ಬಂಧಿತರು 30 ಪ್ರಕರಣಗಳಲ್ಲಿ ಪಾಲ್ಗೊಂಡಿರುವುದು ಬೆಳಕಿಗೆ ಬಂದಿತ್ತು.

ಪೊಲೀಸರು ಬಂಧಿತರಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಐವರು ಉತ್ತರ ಭಾರತದಿಂದ ಸರಗಳ್ಳತನಕ್ಕಾಗಿಯೇ ಬೆಂಗಳೂರಿಗೆ ಆಗಮಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+