ಐವರಲ್ಲಿ ಮೂರು ಶಾಸಕರಿಗೆ ನಿಗಮ ಮಂಡಳಿ ಸ್ಥಾನ,ಇಬ್ಬರ ಸ್ಥಿತಿ ತ್ರಿಶಂಕು

ಬೆಂಗಳೂರು, ಜನವರಿ 09: ನಿಗಮ ಮಂಡಳಿ ಸ್ಥಾನ ಕೈತಪ್ಪಿದ್ದ ಐದು ಜನ ಕಾಂಗ್ರೆಸ್‌ ಶಾಸಕರ ಪೈಕಿ ಮೂವರಿಗೆ ಮತ್ತೆ ಅದೇ ಹುದ್ದೆ ಸಿಕ್ಕಿದೆ ಆದರೆ ಇಬ್ಬರು ಶಾಸಕರಿಗೆ ಇನ್ನೂ ಸಿಕ್ಕಿಲ್ಲ.

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರನ್ನು ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಅವರನ್ನು ಬಿಎಂಟಿಸಿ ನಿಗಮದ ಅಧ್ಯಕ್ಷರನ್ನಾಗಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಮೊದಲ ಪಟ್ಟಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಹಾಗೂ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಎರಡನೇಯ ಪಟ್ಟಿಯಲ್ಲಿಯೂ ಸ್ಥಾನ ದೊರೆತಿಲ್ಲ.

Three Congress MLAs appointed to board and corporation president post

ಕಾಂಗ್ರೆಸ್‌ ನವರು 20 ಮಂದಿ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಕ್ಕೆ ಅಂತಿಮಗೊಳಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಂಕಿತಕ್ಕೆ ಕಳುಹಿಸಿದ್ದರು ಆದರೆ ಕುಮಾರಸ್ವಾಮಿ ಅವರು ಐದು ಜನ ಶಾಸಕರ ಹೆಸರು ಕೈಬಿಟ್ಟಿದ್ದರು ಇದು ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು.

ಸಚಿವ ಸ್ಥಾನ ಕೈತಪ್ಪಿರುವ ಕಾರಣ ಈಗಾಗಲೇ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಈಗ ನಿಗಮ ಮಂಡಳಿ ಸ್ಥಾನವೂ ಕೈತಪ್ಪಿರುವ ಕಾರಣ ಇನ್ನಷ್ಟು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+