ಬೆಂಗಳೂರಿನಲ್ಲಿ 12ರಿಂದ ಮೂರು ದಿನ 'ಗೀತಾ ಸಮ್ಮೇಳನ'
ಬೆಂಗಳೂರು, ಡಿ. 9: ನಗರದ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಗೀತಾ ಫೌಂಡೇಶನ್ ಟ್ರಸ್ಟ್ ವತಿಯಿಂದ ಡಿ. 12ರಿಂದ ಮೂರು ದಿನಗಳ ಕಾಲ "12ನೇ ಗೀತಾ ಸಮ್ಮೇಳನ" ಹಮ್ಮಿಕೊಳ್ಳಲಾಗಿದೆ. [ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರ]
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್ ಮುಖ್ಯಸ್ಥ ಡಾ. ಪಿ.ವಿ. ನಾಥ, ಡಿ. 12ರಂದು ಮೈಸೂರು ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಮ್ಮೇಳನ ಉದ್ಘಾಟಿಸುವರು. ಭಾರತೀಯ ವಿದ್ಯಾಭವನದ ಅಧ್ಯಕ್ಷ ಎನ್. ರಾಮಾನುಜ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಧ್ವನಿ ಸುರುಳಿಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಎಂದು ತಿಳಿಸಿದರು. [ಭಗವದ್ಗೀತೆ ಪಾಶಾಗೆ ಜೈ ಹೋ]

ಈ ಸಮ್ಮೇಳನವು ಭಗವದ್ಗೀತೆಯ 12ನೇ ಭಕ್ತಿ ಅಧ್ಯಾಯವನ್ನು ಒಳಗೊಂಡಿದೆ. ವಿದ್ವಾಂಸರು, ಚಿಂತಕರಿಂದ ಭಗವದ್ಗೀತಾ ಘೋಷ, ಅದರ ಅರ್ಥ, ಗೀತಾ ಸಾರ, ಭಕ್ತಿ ಮತ್ತು ಸ್ವಾಮಿ, ಭಕ್ತಿ, ಜ್ಞಾನ, ಕರ್ಮ, ಧ್ಯಾನ ಪದಗಳ ತತ್ವಾರ್ಥ ಸೇರಿದಂತೆ ಭಗವದ್ಗೀತೆಯ ವಿವಿಧ ಆಯಾಮಗಳನ್ನು ತಿಳಿಸಿಕೊಡಲಾಗುವುದು ಎಂದರು. [ಭಗವದ್ಗೀತೆ ವೆಬ್ ಸೈಟ್ ಗೆ ಚಾಲನೆ]
ಗೀತೆ ಮತ್ತು ಸಂಸ್ಥಾ ನಿರ್ವಹಣೆ, ಗೀತೆ ಮತ್ತು ಮಹಾತ್ಮಾ ಗಾಂಧಿ, ಭಕ್ತಿ ಯೋಗದ ನೆಲೆಯಲ್ಲಿ ಧ್ಯಾನ ಶ್ಲೋಕ ಮುಂತಾದ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ. ಪಿ.ವಿ. ನಾಥ ವಿವರಿಸಿದರು. [ಅಮೆರಿಕ ಸಂಸದೆ ಭಗವದ್ಗೀತೆ ಮೇಲೆ ಪ್ರಮಾಣ ವಚನ]
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka: ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications