Kadalekai Parishe 2023: ಡಿ. 2 ರಿಂದ ಮೂರು ದಿನ ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆ: ಮಿಸ್ ಮಾಡ್ಕೋಬೇಡಿ
ಬೆಂಗಳೂರು, ನವೆಂಬರ್ 27: ಡಿಸೆಂಬರ್ 2 ರಿಂದ 4ರವರಗೆ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ. ಕಾಡುಮಲ್ಲೇಶ್ವರ ಗೆಳಯರ ಬಳಗ ಮುಜಾರಾಯಿ ಇಲಾಖೆ ಸಹಕಾರದಲ್ಲಿ ಬೆಂಗಳೂರುನಗರ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿವರ್ಷದಂತೆ ಮೂರು ದಿನಗಳ ಕಾಲ 2-12-2023ರಿಂದ 4-12-2023ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.
ಕಾಡುಮಲ್ಲೇಶ್ವರ ಗೆಳಯರ ಬಳಗ ಅಧ್ಯಕ್ಷರಾದ ಬಿ.ಕೆ.ಶಿವರಾಂ. ಕಾಂಗ್ರೆಸ್ ಪಕ್ಷದ ಮುಖಂಡರಾದ ಅನೂಪ್ ಅಯ್ಯಂಗಾರ್ ರವರು, ಸಮಾಜ ಸೇವಕರಾದ ಚಂದ್ರಶೇಖರ್ ನಾಯ್ಡು, ಹಿಮಾಂಶು ಶಾಲೆಯ ಪ್ರಾಂಶುಪಾಲರಾದ ಚಂದ್ರಮೌಳಿ, ಅರ್ಚಕರಾದ ಗಂಗಾಧರ್ ದೀಕ್ಷಿತ್ , ಶಶಿಧರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

7ನೇ ವರ್ಷದ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಜರುಗಲಿದೆ. 800ಕೆಜಿ ಕಡಲೆಕಾಯಿಗಳಿಂದ ಶೃಂಗಾರಿಸಿದ 20 ಎತ್ತರ 20 ಉದ್ದದ ನಂದಿಯನ್ನು ಇಡಲಾಗುತ್ತದೆ.ಡಿಸೆಂಬರ್ 2ರಂದು ಬೆಳಗ್ಗೆ 11ಗಂಟೆಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ರವರು , ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು, ಮಾಜಿ ಸಚಿವರು, ಶಾಸಕರುಗಳಾದ ಮುನಿರತೃ, ಡಾ.ಸಿ.ಎನ್.ಅಶ್ವಥ್ ನಾರಾಯಣ್ ರವರು ಕಡಲೆಕಾಯಿ ಪರಿಷೆ ಉದ್ಘಾಟನೆ ಮತ್ತು ಹಸಿರು ಚೈತನ್ಯೋತ್ಸವ ಗಿಡ ಮೂಲಕ ಚಾಲನೆ ನೀಡಲಿದ್ದಾರೆ.ಸಂಜೆ ಮಹಿಳಾ ಯಕ್ಷಗಾನ ಮಂಡಳಿ ಶ್ರೀಮತಿ ಶೈಲಜಾ ಜೋಶಿ ಮತ್ತು ತಂಡದವರಿಂದ ಯಕ್ಷಗಾನ ನಡೆಯಲಿದೆ.
ಡಿಸೆಂಬರ್ 3ನೇ ತಾರೀಖು ಬೆಳಗ್ಗೆ 11-30ಕ್ಕೆ ಪಂಚಮ ಸಂಗೀತ ತಂಡ ಎಲ್.ಶಿವಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ ನಡೆಯಲಿದೆ. ಸಂಜೆ ಮಧು ಮನೋಹರ್ ಮತ್ತು ಕಾರ್ತಿಕ್ ಪಾಂಡವಪುರ ತಂಡದವರಿಂದ ಗಾನ ಗಂಧರ್ವ ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಸವಿ ನೆನಪಿನಲ್ಲಿ ಮಧುರ ನೆನಪಿನಗಾನ ನಡೆಯಲಿದೆ.
4ಡಿಸೆಂಬರ್ ಬೆಳಗ್ಗೆ 9-30ಕ್ಕೆ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಹಾಗೂ ಪ್ರಸಾದ ವಿನಿಯೋಗ ಮಾಡಲಿದ್ದಾರೆ. ಸಂಜೆ 6-30ಕ್ಕೆ ಭವಾನಿ ಗಾನ ವೃಂದದವರಿಂದ ವಿದೂಷಿ ಶೈಲಜ ಶ್ರೀನಾಥ್ ಮತ್ತು ತಂಡದವರಿಂದ ಶಿವ ವೀಣಾ ಗಾನ ಸಂಗಮ ನಡೆಯಲಿದೆ.
ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ತಮಿಳುನಾಡು, ಆಂಧ್ರ, ತೆಲಂಗಾಣ ನಮ್ಮ ರಾಜ್ಯದಿಂದ ನೂರಾರು ರೈತರು ಕಡಲೆಕಾಯಿ ಪರಿಷೆ ಭಾಗವಹಿಸಲಿದ್ದಾರೆ. 200ಮಳಿಗೆಗಳಲ್ಲಿರೈತರ ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಿಸಲಾಗುವುದು ಸರಿಸುಮಾರು 8ಲಕ್ಷ ಜನರು ಪರಿಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ












Click it and Unblock the Notifications