ನಟಿ ರಾಗಿಣಿ ದ್ವಿವೇದಿ 3 ದಿನ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್ 04: ನಟಿ ರಾಗಿಣಿ ದ್ವಿವೇದಿಯನ್ನು ಮೂರು ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಯನ್ನು ಶುಕ್ರವಾರ ಸಂಜೆ ಬಂಧಿಸಿದ್ದರು.

ರಾಗಿಣಿ ದ್ವಿವೇದಿ ಬಂಧಿಸಿದ ಬಳಿಕ ಪೊಲೀಸರು ಆಕೆಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆ ಮಾಡಿಸಿದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡರು.

ಶುಕ್ರವಾರ ರಾಗಿಣಿ ದ್ವಿವೇದಿ ವಿಚಾರಣೆ ಪೂರ್ಣಗೊಂಡಿದೆ. ಆದರೆ, ಸಿಸಿಬಿ ಕಚೇರಿಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಅವರು ಸಿದ್ದಾಪುರದಲ್ಲಿರುವ ಸ್ಟೇಟ್‌ ಹೋಮ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Three Days Of Police Custody For Kannada Actress Ragini Dwivedi

ಶನಿವಾರ ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ. ರಾಗಿಣಿ ಅವರ ಆಪ್ತರಾದ ರವಿಶಂಕರ್ ಸಹ 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.

ಸೋಮವಾರ ಜಾಮೀನು ಅರ್ಜಿ: ನಟಿ ರಾಗಿಣಿ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಮನೆಗೆ ಹೋಗಿ ಶನಿವಾರ ಬೆಳಗ್ಗೆ ಪುನಃ ವಿಚಾರಣೆಗೆ ಹಾಜರಾಗುತ್ತೇನೆ ಎಂದು ನಟಿ ರಾಗಿಣಿ ಮಾಡಿದ್ದ ಮನವಿಯನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ರಾಗಿಣಿ ವಾಸ್ತವ್ಯದ ಹಿನ್ನಲೆಯಲ್ಲಿ ಸಿದ್ದಾಪುರದಲ್ಲಿರುವ ಸ್ಟೇಟ್‌ ಹೋಮ್‌ ಸುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು 11.45ರ ಸುಮಾರಿಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತರಲಾಯಿತು. ನಿರಂತರ ವಿಚಾರಣೆ ಬಳಿಕ ಹೆಚ್ಚಿನ ವಿಚಾರಣೆಗಾಗಿ ಬಂಧಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+