ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನೆದಂತ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಸೆರೆ

|
Google Oneindia Kannada News

ಬೆಂಗಳೂರು,ನವೆಂಬರ್ 17: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಂಧ್ರ ಪ್ರದೇಶ ಮೂಲದ ಮೂವರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಗುಟ್ಟುಪಾಳ್ಯಂ ನಿವಾಸಿ ಲೋಕೇಶ್‌, ಮದನಪಲ್ಲಿಯ ಪೂಲಾಕುಟ್ಲಪುರ ನಿವಾಸಿ ಮಂಜುನಾಥ್‌ ಎನ್. ಶ್ರೀಹರಿಪುರ ನಿವಾಸಿ ಗೋವಿ ವಿ. ಎಂಬುವರು ಬಂಧನಕ್ಕೆ ಒಳಗಾದವರು. ಸೋಮವಾರ ಮಧ್ಯಾಹ್ನ ಹೆಬ್ಬಾಳದ ಗುಡ್ಡದಹಳ್ಳಿ ಟೆಂಪೋ ನಿಲ್ದಾಣ ಬಳಿ ಆನೆ ದಂತ ಮಾರಲು ಯತ್ನಿಸಿದ್ದರು.

Three held in Bengaluru for Ivory illegal trade

110 ಕೆ.ಜಿ ಮಾಲು ಸಮೇತ ಸಿಕ್ಕಿಬಿದ್ದ ಗಾಂಜಾ ಶಿವ! 110 ಕೆ.ಜಿ ಮಾಲು ಸಮೇತ ಸಿಕ್ಕಿಬಿದ್ದ ಗಾಂಜಾ ಶಿವ!

ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಸಮೀಪದ ಮರಳು ಲಾರಿ ಸ್ಟ್ಯಾಂಡ್ ಬಳಿ ಮೂರು ಆನೆ ದಂತ ಇಟ್ಟಿರುವ ಸಂಗತಿ ಬಾಯಿ ಬಿಟ್ಟಿದ್ದಾರೆ.

Three held in Bengaluru for Ivory illegal trade

Recommended Video

ಎಷ್ಟ್ ದಿನ ಮೋಸ ಮಾಡ್ತಾರೋ ಮಾಡ್ಲಿ!! | Oneindia Kannada

ಆರೋಪಿಗಳೆಲ್ಲರೂ ಕೂಲಿ ಕೆಲಸ ಮಾಡಿಕೊಂಡಿದ್ದು, ಗೋಪಿ ಎಂಬಾತ ಲೋಕೇಶ್‌ಗೆ ಆನೆ ದಂತಗಳನ್ನು ನೀಡಿದ್ದಾನೆ. ಹೆಚ್ಚಿನ ಬೆಲೆಗೆ ಮಾರಾಟ ಮಾಡಿಕೊಟ್ಟರೆ ಕಮೀಷನ್ ನೀಡುವುದಾಗಿ ಹೇಳಿದ್ದು, ಅದರಂತೆ ತನ್ನ ಸ್ನೇಹಿತರೊಂದಿಗೆ ಸೇರಿ ಆನೆ ದಂತಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

English summary
Three people were arrested in Bengaluru Hebbal for illegal Ivory tusk trade. Hebbal police registered case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X