ಕಾರು-ಕ್ಯಾಂಟರ್ ಡಿಕ್ಕಿ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಸಾವು
ದೇವನಹಳ್ಳಿ, ಸೆಪ್ಟೆಂಬರ್ 5: ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಬುಧವಾರ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಬೆಳಗಿನ ಜಾವ ಕಾರು ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶಾಲ್, ಪ್ರಜ್ವಲ್, ಭೂಷಣ್ ಮೃತ ದುರ್ದೈವಿಗಳು, ಇವರು ಬೆಂಗಳೂರಿನ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಏರ್‌ಪೋರ್ಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications