• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು: ಯಲಹಂಕದಲ್ಲಿ ಒಂದೇ ದಿನ 3 ಕೊರೊನಾ ಕ್ಲಸ್ಟರ್‌ಗಳು ಪತ್ತೆ

|
Google Oneindia Kannada News

ಬೆಂಗಳೂರು, ಮಾರ್ಚ್ 19: ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದ್ದು, ಕೋವಿಡ್‌ 19 ಕ್ಲಸ್ಟರ್‌ಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹೊಸದಾಗಿ 3 ಕ್ಲಸ್ಟರ್‌ಗಳನ್ನು ಗುರುವಾರ ಗುರುತಿಸಲಾಗಿದೆ.

ಗುರುವಾರ ಒಂದೇ ದಿನ 925 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಯಲಹಂಕ ವಲಯದಲ್ಲಿ ಒಂದೇ ದಿನ ಮೂರು ಹೊಸ ಕ್ಲಸ್ಟರ್‌ಗಳನ್ನು ಗುರುತಿಸಲಾಗಿದೆ.

Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?Explained: ಭಾರತದಲ್ಲಿ ಕೊರೊನಾ ಲಸಿಕೆ ವ್ಯರ್ಥಕ್ಕೆ ಕಾರಣವೇನು?

ವಾರ್ಡ್ ಸಂಖ್ಯೆ 4,9,10ರಲ್ಲಿನ ಅಪಾರ್ಟ್‌ಮೆಂಟ್‌ಗಳಲ್ಲಿ ಐದಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇವುಗಳನ್ನು ಕ್ಲಸ್ಟರ್ ಎಂದು ಗುರುತಿಸಲಾಗಿದೆ. ವಾರ್ಡ್ ಸಂಖ್ಯೆ 9 ರ ಗೋವರ್ಧನ್ ರೆಸಿಡೆನ್ಸಿಯಲ್ಲಿ ಮಾ.1 ರಂದು ಕೇರಳದಿಂಬ ಬಂದ ವ್ಯಕ್ತಿಯೊಬ್ಬರಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕೋವಿಡ್ ದೃಢಪಟ್ಟಿದೆ.

8 ರಂದು ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದು, ಕೋವಿಡ್ ಇರುವುದು ದೃಢಪಟ್ಟಿದೆ. ಅವರು ವಾಸವಿದ್ದ ಇಡೀ ಅಪಾರ್ಟ್‌ಮೆಂಟ್ ಅನ್ನು ಕಟ್ಟುನಿಟ್ಟಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಅದೇ ರೀತಿ ವಾರ್ಡ್ ಸಂಖ್ಯೆ 10 ರಲ್ಲಿನ ಬಿಇಎಲ್ ಬಡಾವಣೆಯಲ್ಲಿ ಒಂದೇ ಕುಟುಂಬದ ಐವರಲ್ಲಿ ಕೋವಿಡ್ ದೃಢಪಟ್ಟಿದೆ. ಮಾ.2 ರಂದು ಈ ಕುಟುಂಬ ಆರ್‌ಟಿ ನಗರದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು.

ಬೆಂಗಳೂರು: ಕೊರೋನಾ ಲಸಿಕಾ ಕೇಂದ್ರಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಗುರುವಾರ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ವೈದ್ಯಕೀಯ ವ್ಯವಸ್ಥೆ ಇಲ್ಲದ ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡಲು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

   ರಕ್ತ ಸಂಗ್ರಹಣೆ ಮತ್ತು ಸಾಗಾಟ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ | Oneindia Kannada

   ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು. ವೃದ್ಧಾಶ್ರಮ, ಅಪಾರ್ಟ್‌ಮೆಂಟ್ ಸಮುಚ್ಛಯ ಸೇರಿದಂತೆ ವಿವಿಧೆಡೆಯಲ್ಲಿ ವಾಸವಿರುವ ಹಿರಿಯ ನಾಗರಿಕರಿಗೆ ಲಸಿಕೆ ಪಡೆಯಲು ಹತ್ತಿರದಲ್ಲಿ ಕೇಂದ್ರಗಳು ಇರದಿದ್ದಲ್ಲಿ ಪರ್ಯಾಯ ಸೌಕರ್ಯವನ್ನು ಕಲ್ಪಿಸಬೇಕು.‌ ಇಲ್ಲವಾದಲ್ಲಿ ಸಾರಿಗೆ ವ್ಯವಸ್ಥೆಯನ್ನು ಒದಗಿಸಿ, ಕೋವಿಡ್‌ ಲಸಿಕೆ ವಿತರಣೆ ಕೇಂದ್ರಗಳಿಗೆ ಕರೆತರಬೇಕು ಎಂದು ತಿಳಿಸಲಾಗಿದೆ.

   English summary
   Three new clusters have been detected in Yelahanka zone, taking the total number of active clusters to five. However, contact tracing is proving to be a nightmare as one family visited a temple despite being asked to remain in home isolation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X