ಸಚಿವರಾಗಿ ಗೀತಾ, ರೇವಣ್ಣ, ತಿಮ್ಮಾಪುರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಸೆಪ್ಟೆಂಬರ್, 01: ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್, ಎಚ್.ಎಂ. ರೇವಣ್ಣ ಹಾಗೂ ಆರ್.ಬಿ. ತಿಮ್ಮಾಪುರ ಅವರು ಇಂದು (ಸೆ.1) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಈ ಮೂವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು.

ತಿಮ್ಮಾಪುರ ಹಾಗೂ ರೇವಣ್ಣ ಅವರು ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇನ್ನು ದಿವಂಗತ ಮಹದೇವಪ್ರಸಾದ್ ಅವರ ಪತ್ನಿ ಗೀತಾ ಮಹದೇವ ಪ್ರಸಾದ್ ಅವರು ರಾಜ್ಯ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಹುತೇಕ ಎಲ್ಲಾ ಸಚಿವರುಗಳು ಉಪಸ್ಥಿತರಿದ್ದರು.












Click it and Unblock the Notifications