ಶೀಘ್ರದಲ್ಲೇ ಬೆಂಗಳೂರಿನ ಮೂರು ರಸ್ತೆ ಅಗಲೀಕರಣ
ಬೆಂಗಳೂರು, ಸೆ.9 : ಬನ್ನೇರುಘಟ್ಟ, ಉತ್ತರಹಳ್ಳಿ ಮತ್ತು ಸುಬ್ರಮಣ್ಯಪುರ ರಸ್ತೆಗಳ ಅಗಲೀಕರಣ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಶಾಂತ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ರಸ್ತೆಗಳ ಅಗಲೀಕರಣ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಮೇಯರ್ ಶಾಂತಕುಮಾರಿ ಅವರು ಬೆಂಗಳೂರು ದಕ್ಷಿಣ ಭಾಗದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು, ಈ ಸಂದರ್ಭದಲ್ಲಿ ಬನ್ನೇರುಘಟ್ಟ, ಉತ್ತರಹಳ್ಳಿ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆಗಳನ್ನು ಅಗಲೀಕರಣ ಮಾಡುವ ಕಾಮಗಾರಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅಗಲೀಕರಣ ಅನಿವಾರ್ಯವಾಗಿದೆ. ರಸ್ತೆ ಅಗಲೀಕರಣದಿಂದ ಆಸ್ತಿ ಕಳೆದುಕೊಳ್ಳುವವರು ಜಾಗ ಬಿಟ್ಟುಕೊಡಲು ಸಿದ್ಧರಾಗಿದ್ದಾರೆ. ಆದ್ದರಿಂದ ಅವರಿಗೆ ಸೂಕ್ತ ಪರಿಹಾರವನ್ನು ನೀಡಿದ ತಕ್ಷಣ ಕಾಮಗಾರಿಯನ್ನು ಆರಂಭ ಮಾಡಿ ಎಂದು ಮೇಯರ್ ಶಾಂತ ಕುಮಾರಿ ಅವರು ಅಧಿಕಾರಿಗಳಿಗೆ ತಿಳಿಸಿದರು. [ಬೆಂ-ಮೈಸೂರು ಹೆದ್ದಾರಿಗೆ ಟೋಲ್ ಕಟ್ಟಲು ಸಜ್ಜಾಗಿ]
ಮೇಯರ್ ಮಿಂಚಿನ ಸಂಚಾರ : ಮಂಗಳವಾರ ಬೆಳಗ್ಗೆ ಉಪ ಮೇಯರ್ ರಂಗಣ್ಣ ಅವರೊಂದಿಗೆ ಮೊದಲು ಉತ್ತರಹಳ್ಳಿ ವಾರ್ಡ್ ನಂಬರ್ 184ಕ್ಕೆ ಭೇಟಿ ನೀಡಿ ಕಸ ಗುಡಿಸುವ ಪೌರ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಗ್ಲೌಸ್ ಕೊಟ್ಟಿದ್ದಾರೆಯೇ, ಸಮವಸ್ತ್ರ ನೀಡಲಾಗಿದೆಯೇ ಎಂಬ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಣೆ ಮಾಡಿದರು. [ಜಯನಗರ ಬಡಾವಣೆಗೊಂದು ಸ್ಮಾರ್ಟ್ ರಸ್ತೆ ನಿರ್ಮಾಣ]
ನಂತರ ಉತ್ತರಹಳ್ಳಿ ಕೆರೆಗೆ ಭೇಟಿ ನೀಡಿ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಯಾದಾಳಮ್ ನಗರಕ್ಕೆ ಭೇಟಿ ನೀಡಿದರು, ಅಲ್ಲಿನ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮೇಯರ್ ಅವರಿಗೆ ದೂರು ನೀಡಿದರು. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಕೋಣನಕುಂಟೆ ಕ್ರಾಸ್‌ಗೆ ಭೇಟಿ ನೀಡಿದ ಅವರು, ಒಳ ಚರಂಡಿ, ರಸ್ತೆ ಮತ್ತು ರಾಜಕಾಲುವೆ ಕಾಮಗಾರಿಗಳನ್ನು ವೀಕ್ಷಿಸಿದರು. ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ಪಾಲಿಕೆ ಸದಸ್ಯರಾದ ರಮೇಶ್ ರಾಜು, ವಿಜಯ ರಮೇಶ್ ಹಾಗೂ ಪಾಲಿಕೆ ಅಧಿಕಾರಿಗಳು ಮೇಯರ್ ಜೊತೆಗಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications