ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಕೆಲವೇ ಗಂಟೆಗಳಲ್ಲಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 10: ನಗರದಲ್ಲಿ ಗುರುವಾರ ಮಿಂಚು ಗುಡುಗು ಸಹಿತ ಮಳೆಯಾಗುವುದಾಗಿ ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಿ ಮಳೆ ಆರಂಭವಾಗುವುದು ಎಂದು ಕೇಂದ್ರ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಮಳೆಯಾಗುವ ಮೂಲಕ ರಾಜ್ಯಕ್ಕೆ ಮುಂಗಾರು ಮಳೆ ಆಗಮನವನ್ನು ಸೂಚಿಸಿತ್ತು.

ಕೊಡಗು ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್ಕೊಡಗು ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್

ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದ್ದು, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲಿ ಮಳೆಯಾಗುವುದಾಗಿ ಇಲಾಖೆ ಮುನ್ಸೂಚನೆ ನೀಡಿತ್ತು.

Thunderstorm Likely Over Bengaluru In Next 3 Hours

ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 128 ಎಂಎಂ ಮಳೆಯಾಗಿತ್ತು. ಜೂನ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆಯಾಗಲಿದ್ದು, ತಿಂಗಳಿಗೆ 89 ಎಂಎಂ ಮಳೆಯಾಗುವುದಾಗಿ ಈ ಹಿಂದೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿತ್ತು.

ಜೂನ್‌ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಮುಂಗಾರು ಮಳೆಯಾಗಲಿದ್ದು, ಈ ವರ್ಷ ಮಳೆ ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿಯಲ್ಲಿರಲಿದ್ದು ಕೇಂದ್ರ ಭಾಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ ಎಂದು ತಿಳಿಸಿದೆ.

Recommended Video

ರೋಹಿತ್, ಕೊಹ್ಲಿ ಮನಸ್ತಾಪ ಸರಿ ಅಲ್ಲ ಪಾಕಿಸ್ತಾನ ಆಟಗಾರ | oneindia Kannada

English summary
Bengaluru Meteorological centre on thursday predicted thunderstorm, lightening with light spells of rain,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X