ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಮತ್ತೆ ತಂಪೆರೆದ ಮಳೆರಾಯ, ಹಲವೆಡೆ ಆಲಿಕಲ್ಲು ಮಳೆ

|
Google Oneindia Kannada News

ಬೆಂಗಳೂರು, ಮೇ 15: ಬೆಂಗಳೂರಿನ ಹಲವೆಡೆ ಮಳೆರಾಯ ತಂಪೆರೆದಿದ್ದಾನೆ. ವಿದ್ಯಾರಣ್ಯಪುರ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆ ಬೀದ್ದಿದ್ದು, ಕಾರ್ಪೊರೇಷನ್, ಬನಶಂಕರಿ, ಕೆಂಗೇರಿ, ಮಲ್ಲೇಶ್ವರ, ವಿಧಾನಸೌಧ ಸುತ್ತಮುತ್ತಲಿನ ಭಾಗದಲ್ಲಿ ಗುಡುಗಿನಿಂದ ಕೂಡಿದ ಸಾಧಾರಣ ಮಳೆಯಾಗಿದೆ.

ಮುಂದಿನ 3 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇವತ್ತು ಸಹ ಮಳೆಯ ಅಬ್ಬರ ಮುಂದುವರೆಯಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಕೋಲಾರ, ಚಿಕ್ಕಬಳಾಪುರ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು ಸೇರಿ ರಾಜ್ಯದ ಹಲವೆಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೀಗಾಗಿ, ಜನ ಈಗಲೇ ಮುನ್ನೆಚ್ಚರಿಕೆ ವಹಿಸಿದರೆ ಮಳೆಯಿಂದ ಆಗುವ ತೊಂದರೆಯಿಂದ ಪಾರಾಗಬಹುದಾಗಿದೆ.

Thunderstorms and rains for the next two days in the city

ಬೆಂಗಳೂರಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 35.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 34.8 wಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮದ್ದೂರಿನಲ್ಲಿ 6 ಸೆಂ.ಮೀ, ಹೊಸಕೋಟೆ, ಆನೇಕಲ್‌, ಮಂಡ್ಯದಲ್ಲಿ 2 ಸೆಂ.ಮೀ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ತಲಾ ಒಂದು ಸೆಂ.ಮೀನಷ್ಟು ಮಳೆಯಾಗಿದೆ.

English summary
Heavy rainfall lashed parts of the city on Wednesday afternoon. But dont be in a hurry to put away the rain coat. A latest advisory from met department predicts rain for two more days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X