ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗಸ್ಟ್‌ 5ರವರೆಗೆ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲ

|
Google Oneindia Kannada News

Recommended Video

ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ B. S. Yeddyurappa | Oneindia Kannada

ಬೆಂಗಳೂರು, ಆಗಸ್ಟ್ 1: ಆಗಸ್ಟ್ 5ರವರೆಗೆ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸಿಎಂ ಬಿಎಸ್‌ ಯಡಿಯೂರಪ್ಪ ಆಗಸ್ಟ್ 5ರಂದು ದೆಹಲಿಗೆ ತೆರಳುತ್ತಿದ್ದು, ಅದಾದ ಬಳಿಕವಷ್ಟೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವ ಕುರಿತು ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದಾರೆ.

2 ಹಂತದಲ್ಲಿ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪ ಲೆಕ್ಕಾಚಾರ 2 ಹಂತದಲ್ಲಿ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪ ಲೆಕ್ಕಾಚಾರ

ಕೆಲವು ಶಾಸಕರು ಪ್ರಭಾವಿಗಳಿಂದ ಹೇಳಿಸುವ ಕೆಲಸ ಮಾಡುತ್ತಿದ್ದಾರೆ, ಆದರೆ ಇದ್ಯಾವುದಕ್ಕೂ ವರಿಷ್ಠರು ಸೊಪ್ಪು ಹಾಕುತ್ತಿಲ್ಲ. ನಮ್ಮ ಭವಿಷ್ಯ ಏನೆಂಬುದೇ ನಮಗೆ ಗೊತ್ತಿಲ್ಲ, ನಿಮಗೆ ನಾವು ಹೇಗೆ ಭರವಸೆ ನೀಡಲು ಸಾಧ್ಯ. ಮೊದಲ ಬಾರಿ ಆಯ್ಕೆಯಾದವರು ಸಚಿವ ಸ್ಥಾನದ ಆಕಾಂಕ್ಷೆ ಬಿಟ್ಟು, ನಿಗಮ-ಮಂಡಳಿಗಳಿಗೆ ಪ್ರಯತ್ನಿಸುವುದು ಸೂಕ್ತ ಎಂಬ ಸಲಹೆ ನೀಡಬೇಕಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಸಲಹೆ ನೀಡಿದ್ದಾರೆ.

Till August 5 No Cabinet Expansion

ವಿಧಾನ ಪರಿಷತ್ ಸದಸ್ಯರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ, ಆಯನೂರು ಮಂಜುನಾಥ್ ಮತ್ತು ಎನ್. ರವಿ ಕುಮಾರ್ ಹೆಸರು ಕೇಳಿ ಬರುತ್ತಿದೆ. ರವಿ ಕುಮಾರ್ ಮಲ್ಲಿಕಾರ್ಜುನ ಖರ್ಗೆ ಸೋಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ.

ರಾಜೀನಾಮೆ ನೀಡಿರುವ ಅತೃಪ್ತರಿಗೆ 12 ಸಚಿವ ಸ್ಥಾನ ಕಾಯ್ದಿರಿಸಿ, ಇನ್ನೊಂದು ಹಂತದಲ್ಲಿ ಉಳಿದವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ.ಒಟ್ಟು ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಮೊದಲ ಹಂತದಲ್ಲಿ 10 ಪ್ರಮುಖ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್‌ನ ಅತೃಪ್ತರು ಎರಡನೇ ಹಂತದಲ್ಲಿ ಸಂಪುಟ ಸೇರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Yeddyurappa cabinet expansion in two stages but till August 5 there is no cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X