ಜೆಡಿಎಸ್ ಕಚೇರಿಯಲ್ಲಿ ನವೆಂಬರ್ 10ರ ಮಧ್ಯಾಹ್ನ 3.30ಕ್ಕೆ ಟಿಪ್ಪು ಜಯಂತಿ
ಬೆಂಗಳೂರು, ನವೆಂಬರ್ 9: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಹಾಗೂ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ವಿಭಾಗದಿಂದ ನವೆಂಬರ್ 10ರ ಶುಕ್ರವಾರ ಮಧ್ಯಾಹ್ನ 3.30ಕ್ಕೆ ಶೇಷಾದ್ರಿಪುರಂನ ಪ್ಲಾಟ್ ಫಾರಂ ರಸ್ತೆಯಲ್ಲಿರುವ ಜೆ.ಪಿ. ಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಯೋಜಿಸಲಾಗಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಜಫ್ರುಲ್ಲಾ ಖಾನ್, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ, ಜೆಡಿಎಸ್ ಹಿರಿಯ ಉಪಾಧ್ಯಕ್ಷ ಸೈಯದ್ ಶಫೀಉಲ್ಲಾ ಸಾಹೇಬ್ ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು.
In Pics : ಟಿಪ್ಪು ಸುಲ್ತಾನ್ ಯಾರಂತ ಗೊತ್ತಾ ಪುಟ್ಟಾ?

ಜೆಡಿಎಸ್ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ರಾಜ್ಯ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಕಚೇರಿ ಆಡಳಿತ) ಎಸ್.ರಮೇಶ್ ತಿಳಿಸಿದ್ದಾರೆ.











Click it and Unblock the Notifications