ಟಿಪ್ಪು ಜಯಂತಿ ಕುರಿತು ಸಚಿವೆ ಜಯಮಾಲಾ ನೇತೃತ್ವದಲ್ಲಿ ಸಭೆ

ಬೆಂಗಳೂರು, ನವೆಂಬರ್ 3: ಟಿಪ್ಪು ಜಯಂತಿ ಆಚರಣೆ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಯಿತು.

ದೀಪಾವಳಿ ವಿಶೇಷ ಪುರವಣಿ

ಸಚಿವ ಜಮೀರ್ ಅಹಮದ್ ಕೂಡ ಸಭೆಯಲ್ಲಿ ಪಾಲಗೊಂಡಿದ್ದರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ ಟಿಪ್ಪು ಆಚರಣೆ ಒಂದು ರೂಪ ಪಡೆದುಕೊಳ್ಳಲಿದೆ.

ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ 1ಸಾವಿರ ದಂಡ ವಿಧಿಸಿತ್ತು. ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದನ್ನು ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿತ್ತು.

Tipu Jayanti, minister Jayamala holds a meeting

ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿತ್ತು. ಆದರೆ ಯಾವುದೇ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆಯಾಗಿರಲಿಲ್ಲ.

ನಿನ್ನೆಯಷ್ಟೇ ಕುಮಾರಸ್ವಾಮಿ ಟಿಪ್ಪು ಜಯಂತಿ ವಿಚಾರದ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವಂತೆ ಹಾಗೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದರು. ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಯೋಜನೆಗಳು, ಕಾರ್ಯಕ್ರಮಗಳು ಮುಂದುವರೆಸಲು ಬದ್ಧನಾಗಿದ್ದೇನೆ ಅದರಂತೆ ಟಿಪ್ಪು ಜಯಂತಿ ಸಹ ಮುಂದುವರೆಯಲಿದೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+