ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಿಪ್ಪು ಜಯಂತಿ ಕುರಿತು ಸಚಿವೆ ಜಯಮಾಲಾ ನೇತೃತ್ವದಲ್ಲಿ ಸಭೆ

|
Google Oneindia Kannada News

ಬೆಂಗಳೂರು, ನವೆಂಬರ್ 3: ಟಿಪ್ಪು ಜಯಂತಿ ಆಚರಣೆ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಯಿತು.

ದೀಪಾವಳಿ ವಿಶೇಷ ಪುರವಣಿ

ಸಚಿವ ಜಮೀರ್ ಅಹಮದ್ ಕೂಡ ಸಭೆಯಲ್ಲಿ ಪಾಲಗೊಂಡಿದ್ದರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ ಟಿಪ್ಪು ಆಚರಣೆ ಒಂದು ರೂಪ ಪಡೆದುಕೊಳ್ಳಲಿದೆ.

ಟಿಪ್ಪು ಜಯಂತಿ ಆಚರಣೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು? ಟಿಪ್ಪು ಜಯಂತಿ ಆಚರಣೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ 1ಸಾವಿರ ದಂಡ ವಿಧಿಸಿತ್ತು. ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದನ್ನು ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿತ್ತು.

ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್! ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್!

Tipu Jayanti, minister Jayamala holds a meeting

ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿತ್ತು. ಆದರೆ ಯಾವುದೇ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆಯಾಗಿರಲಿಲ್ಲ.

ಟಿಪ್ಪು ಜಯಂತಿ ಆಚರಿಸಿದರೆ ತಕ್ಕ ಶಾಸ್ತಿ: ಸರ್ಕಾರಕ್ಕೆ ಈಶ್ವರಪ್ಪ ಎಚ್ಚರಿಕೆ ಟಿಪ್ಪು ಜಯಂತಿ ಆಚರಿಸಿದರೆ ತಕ್ಕ ಶಾಸ್ತಿ: ಸರ್ಕಾರಕ್ಕೆ ಈಶ್ವರಪ್ಪ ಎಚ್ಚರಿಕೆ

ನಿನ್ನೆಯಷ್ಟೇ ಕುಮಾರಸ್ವಾಮಿ ಟಿಪ್ಪು ಜಯಂತಿ ವಿಚಾರದ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವಂತೆ ಹಾಗೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದರು. ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಯೋಜನೆಗಳು, ಕಾರ್ಯಕ್ರಮಗಳು ಮುಂದುವರೆಸಲು ಬದ್ಧನಾಗಿದ್ದೇನೆ ಅದರಂತೆ ಟಿಪ್ಪು ಜಯಂತಿ ಸಹ ಮುಂದುವರೆಯಲಿದೆ ಎಂದು ಹೇಳಿದ್ದರು.

English summary
Minister Jayamala holds a meeting at the VidhanaSoudha for the preparations of TipuJayanti. Minister Zameer Ahmed also took part in the meeting. The celebrations will take shape after CM HD Kumaraswamy gives it a green signal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X