ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬಿಬಿಎಂಪಿ ಚುನಾವಣೆಗೆ ಆ.25ರಂದು ಮತದಾರ ಪಟ್ಟಿ ಕರಡು ಪ್ರಕಟ

|
Google Oneindia Kannada News

ಬೆಂಗಳೂರು, ಆಗಸ್ಟ್ 20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ.

ಬಿಬಿಎಂಪಿ ಚುನಾವಣೆಯ ಪೂರ್ವ ಸಿದ್ದತಾ ಸಭೆಯನ್ನು ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆಸಲಾಯಿತು. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮತದಾರರ ಪಟ್ಟಿಯ ಕರಡು ಪ್ರತಿಯನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

Breaking: ಅಕ್ಟೋಬರ್‍‌ನಲ್ಲೇ ಬಿಬಿಎಂಪಿ ಚುನಾವಣೆ? ಇಂದು ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆBreaking: ಅಕ್ಟೋಬರ್‍‌ನಲ್ಲೇ ಬಿಬಿಎಂಪಿ ಚುನಾವಣೆ? ಇಂದು ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ

ವಾರ್ಡ್‌ಗಳ ಮತಗಟ್ಟೆಗಳ ಪರಿಶೀಲನೆ:
ಈ ಬಾರಿಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 198 ರಿಂದ 243ಕ್ಕೆ ಏರಿಕೆಯಾಗಿದೆ. ಈ ವಾರ್ಡ್ ಮರು ವಿಂಗಡನೆಯಾದ ಹಿನ್ನೆಲೆ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್ ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕು ಎಂದು ಬಸವರಾಜು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Title: BBMP Elections: Draft voters list published on August 25

ಮತದಾನ ಹೆಚ್ಚಳಕ್ಕೆ ಪ್ರಚಾರ:
ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದು ಬಸವರಾಜು ಅಭಿಪ್ರಾಯ ಪಟ್ಟಿದ್ದಾರೆ.

Title: BBMP Elections: Draft voters list published on August 25

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ‌ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಈ ಸಭೆಯಲ್ಲಿ ಹಾಜರಿದ್ದರು.

English summary
The stage is set for the Bruhath Bengaluru Mahanagara Palika (BBMP) elections and the draft voter list will be published on August 25, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X