ಆರ್ ಟಿಇ ಕಾಯ್ದೆಯ ಆನ್ ಲೈನ್ ಅರ್ಜಿ ಅವಧಿ ವಿಸ್ತರಣೆ
ಬೆಂಗಳೂರು,ಮಾರ್ಚ್,15: ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (Right to Education)ಗೆ ಸಲ್ಲಿಸಬೇಕಾದ ಅರ್ಜಿ ಅವಧಿಯನ್ನು ಮಾರ್ಚ್ 22ರವರೆಗೆ ವಿಸ್ತರಿಸಲಾಗಿದೆ.
ಎಲ್ ಕೆಜಿ ಅಥವಾ ಒಂದನೇ ತರಗತಿಗೆ ಪ್ರವೇಶ ಕೋರಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ. 23ರಿಂದ ಮಾರ್ಚ್ 15ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಪೋಷಕರ ಒತ್ತಾಯದ ಮೇರೆಗೆ ಮುಂದೂಡಲಾಗಿದೆ.[ಬಡಮಕ್ಕಳಿಗೆ ಶಾಲೆಯಲ್ಲಿ ಸೀಟು ಬಿಟ್ಟುಕೊಡಿ]

ಆರ್ ಟಿಇ ಕಾಯ್ದೆಯಡಿ ಮಾರ್ಚ್ 14ರವರೆಗೆ ರಾಜ್ಯಾದ್ಯಂತ 1.95 ಲಕ್ಷ ಅರ್ಜಿಗಳು ಬಂದಿದ್ದವು. ಆದರೆ ಪೋಷಕರ ಒತ್ತಾಯದ ಮೇರೆಗೆ ಅರ್ಜಿ ಸಲ್ಲಿಸಲು ಇನ್ನಷ್ಟು ಅವಕಾಶ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಆನಂದ್ ತಿಳಿಸಿದ್ದಾರೆ.
ಆರ್ ಟಿಇ ಗೆ ಅರ್ಜಿ ಸಲ್ಲಿಸಲು ಸಹಾಯವಾಣಿ:
ಸ್ವತಃ ಆನ್‌ಲೈನ್ ಅರ್ಜಿ ಭರ್ತಿ ಮಾಡಲಾಗದವರು ಬಿಇಒ ಕಚೇರಿಗಳಲ್ಲಿ ಅರ್ಜಿ ಭರ್ತಿ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಕಚೇರಿಯಲ್ಲಿ ಹಾಗೂ ಡಯೆಟ್ (Distric Institution of Education and Training) ನಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.[ಆರ್ ಟಿಇಯಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ತಡೆ ನೀಡಿದ ಹೈಕೋರ್ಟ್]
ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದ ನಿರ್ವಹಣೆಗೆ ಪ್ರತ್ಯೇಕವಾಗಿ ಸಿಬ್ಬಂದಿ ನಿಯೋಜಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ










Click it and Unblock the Notifications