ಬೆಂಗಳೂರಿನಲ್ಲಿ ಪ್ರತಿ ಕೆ.ಜಿ.ಟೊಮೆಟೋ ದರ 75 ರೂಪಾಯಿ, ಇನ್ನೊಂದು ವಾರದಲ್ಲಿ 100ಕ್ಕೇ ಏರಿಕೆ.?
Vegetable Prices Hike: ಈಗಾಗಲೇ ದಿನಬಳಕೆ ವಸ್ತುಗಳ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇದರ ನಡುವೆಯೂ ಇದೀಗ ತರಕಾರಿಗಳ ಬೆಲೆ ಗಗನಮುಖಿಯಾಗಿದ್ದು, ಇದರಿಂದ ಸಾಮಾನ್ಯ ಜನರ ಹೊಟ್ಟೆ ಮೇಲೆ ಮತ್ತೆ ಬರೆ ಎಳೆದಂತಾಗಿದೆ. ಅದರಲ್ಲೂ ತರಕಾರಿ ಬೆಲೆ ಏರಿಕೆಯಿಂದ ರಾಜ್ಯ ರಾಜಧಾನಿ ಜನರು ಕಂಗೆಟ್ಟು ಹೋಗಿದ್ದಾರೆ.
ತರಕಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿ ಕೆ.ಜಿ. ಟೊಮೆಟೋಗೆ 75 ರೂಪಾಯಿ ಆಗಿದ್ದು, ಇದು ಶೀಘ್ರದಲ್ಲೇ 100ಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬೆಂಗಳೂರಿನ ಜನರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ ಟೊಮೆಟೋ ಬೆಲೆ ಏರಿಕೆಯಿಂದ ರೈತರಿಗೆ ಏನು ಲಾಭವಾಗುತ್ತಿಲ್ಲ. ಬದಲಿಗೆ ದಲ್ಲಾಳಿಗಳಿಗೆ ಹೆಚ್ಚು ಲಾಭ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.

ಇನನು ಕೆಲವು ದಿನಗಳಿಂದ ರಾಜ್ಯ ರಾಜಧಾನು ಬೆಂಗಳೂರಿನಲ್ಲಿ ನಿರಂತರವಾಗಿ ತರಕಾರಿ ಬೆಲೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ದಿನನಿತ್ಯದ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಈ ಹಿಂದೆ 50 ರೂಪಾಯಿ ಅಸುಪಾಸಿನಲ್ಲಿ ಲಭ್ಯವಾಗುತ್ತಿದ್ದ ತರಕಾರಿಗಳು ಇದೀಗ 100 ರೂಪಾಯಿ ಗಡಿ ದಾಟಿದ್ದು, ಜನರು ಜೋಬು ಸುಡುವಂತೆ ಮಾಡಿದೆ.
ಇನ್ನು ಇದೀಗ ಬೆಂಗಳೂರಿನಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿರುವ ಹಿನ್ನೆಲೆ ಕೈಗೆ ಬಂದಂತಹ ಬೆಳೆಯೂ ನೆಲಕಚ್ಚುತ್ತಿದೆ. ಜೊತೆಗೆ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ತರಕಾರಿಗಳು ಸಿಗದ ಪರಿಣಾಮ ತರಕಾರಿ ಬೆಲೆ ಗಗನಮುಖಿಯಾಗಿದೆ.
ಇನ್ನು ಮತ್ತೊಂದೆಡೆ ನೋಡುವುದಾರೆ, ಕಳೆದ ತಿಂಗಳು ಸೂರ್ಯನ ಶಾಖ ಹೆಚ್ಚಾದ ಹಿನ್ನೆಲೆ ತರಕಾರಿಗಳ ಬೆಲೆಯೂ ಹೆಚ್ಚಾಗಿತ್ತು. ಇದೀಗ ಮಳೆ ಹೆಚ್ಚಾಗಿರುವ ಪರಿಣಾಮ ತರಕಾರಿಗಳ ಬೆಲೆ ಹೆಚ್ಚಳವಾಗಿದೆ. ವ್ಯಾಪಾರಸ್ಥರಿಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆ ಆಗುತ್ತಿಲ್ಲ.
ಸದ್ಯ ಕೇವಲ ರಾಜ್ಯದ ಜಿಲ್ಲೆಗಳಿಂದ ಮಾತ್ರ ತರಕಾರಿ ಪೂರೈಕೆ ಆಗುತ್ತಿದೆ. ಜೊತೆಗೆ ಮಳೆಯಿಂದ ಟೊಮೆಟೋ ಹಾಗೂ ಈರುಳ್ಳಿ ಸರಿಯಾಗಿ ಫಸಲು ಬರುತ್ತಿಲ್ಲ. ಈ ಹಿನ್ನೆಲೆ ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ. ಹೀಗೆ ಮಳೆ ಮುಂದುವರೆದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಅಂತಿದ್ದಾರೆ ವ್ಯಾಪರಸ್ಥರು.
ಬದನೆಕಾಯಿ, ಜವಳಿಕಾಯಿ, ಸೌತೆಕಾಯಿ, ಹಸಿ ಮೆಣಸಿನಕಾಯಿ ಕೆ.ಜಿ.ಗೆ 80-90 ರೂಪಾಯಿಗೆ ಏರಿಕೆಯಾಗಿದೆ. ಟೊಮೆಟೋ ನಿನ್ನೆವರೆಗೂ 50 ಇದ್ದು, ಇದೀಗ ದೀಢರ್ 15 ರೂಪಾಯಿ ಏರಿಕೆಯಾಗುವ ಮೂಲಕ ಒಟ್ಟು 75 ರೂಪಾಯಿ ಮುಟ್ಟಿದೆ. ಕೆಲವೇ ದಿನಗಳಲ್ಲಿ 100 ರೂಪಾಯಿ ಮುಟ್ಟಿದರೂ ಆಶ್ಚರ್ಯವಿಲ್ಲ ಅಂತಿದ್ದಾರೆ ವ್ಯಾಪಾರಿಗಳು.
ಅಷ್ಟೇ ಅಲ್ಲದೆ, ಸೇಬು ಸೇರಿದಂತೆ ಇತರೆ ಹಣ್ಣುಗಳ ಬೆಲೆ ಕೂಡ ಕೆ.ಜಿ.ಗೆ 200-300 ರೂಪಾಯಿಗೆ ಏರಿಕೆಯಾಗಿದ್ದು, ಇದರಿಂದ ಜನಸಾಮಾನ್ಯರ ಜೇಬಿಗೆ ಬರೆ ಎಳೆದಂತಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ











Click it and Unblock the Notifications