ಟೊಮೆಟೊ ಬೆಲೆ ಏಕಾಏಕಿ ಏರಿಕೆ; ಕೆ.ಜಿ.ಗೆ ಗರಿಷ್ಠ 100 ರೂ ತಲುಪುವ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 10: ಕಳೆದ ವಾರದಿಂದ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಟೊಮೆಟೊ ಬೆಲೆ ಏಕಾಏಕಿ ಏರಿಕೆಯಾಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಕೆ.ಜಿಗೆ 10 ರೂ ಇದ್ದ ಟೊಮೆಟೊ ಬೆಲೆ ಕೊನೆಗೆ ಕೆ.ಜಿಗೆ ಗರಿಷ್ಠ 15 ರೂಗೆ ತಲುಪಿತ್ತು. ಮತ್ತೆ ಕಳೆದ ಐದಾರು ದಿನಗಳಿಂದ ಬೆಲೆ ಇದ್ದಕ್ಕಿದ್ದಂತೆ ಏರಿಕೆಯಾಗಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಟೊಮೆಟೊ ಬೆಲೆ 60 ರೂಗೆ ತಲುಪಿದೆ.
ಇದೇ ರೀತಿ ಪರಿಸ್ಥಿತಿ ಮುಂದುವರೆದರೆ, ಬೆಂಗಳೂರಿನಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ ನೂರು ರೂ ತಲುಪಬಹುದು ಎಂದು ವರ್ತಕರು ಅಂದಾಜಿಸಿದ್ದಾರೆ. ಸರಿಯಾದ ಪೂರೈಕೆ ಇಲ್ಲದ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದ್ದರಿಂದ ದಿಢೀರ್ ಆಗಿ ಬೆಲೆ ವ್ಯತ್ಯಾಸ ಕಂಡುಬಂದಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ಮಹಾರಾಷ್ಟ್ರದಿಂದ ಟೊಮೆಟೊ ಪೂರೈಕೆ ಕೊರತೆಯಿಂದಾಗಿ ಬೆಲೆ ಹಠಾತ್ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮ್ಯಾಟೊ ಉತ್ಪಾದಿಸುವ ರಾಜ್ಯಗಳಾಗಿವೆ.
ಕಳೆದ ತಿಂಗಳ ಕೊನೆಯಲ್ಲಿ ನೆರೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗಿದೆ. ಕಡಿಮೆ ತಾಪಮಾನದಿಂದಾಗಿ ಟೊಮೆಟೊ ಬೆಳೆಗೆ ತೀವ್ರ ಹೊಡೆತ ಬಿದ್ದಿದೆ. ನಿರಂತರ ಮಳೆಯಿಂದಾಗಿ ಟೊಮೆಟೊ ಬೆಳೆಯಲು ಸಾಧ್ಯವಾಗಿಲ್ಲ. ಮಳೆ ಪರಿಸ್ಥಿತಿಯಿಂದಾಗಿ ಬೆಳೆ ಉತ್ಪಾದನೆ ಮೇಲೆ ಶೇ 50ರಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ.
ಕೋಲಾರ, ಚಿಂತಾಮಣಿ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಮಾಲೂರು, ಮಾಗಡಿ ಹಾಗೂ ಸುತ್ತಮುತ್ತಲ ಪ್ರದೇಶದಿಂದ ಎಪಿಎಂಸಿಗೆ ಟೊಮೆಟೊ ಸಾಗಣೆಯಲ್ಲಿ 40% ತಗ್ಗಿದೆ. 'ಮಹಾರಾಷ್ಟ್ರದಿಂದಲೂ ನಮಗೆ ಟೊಮೆಟೊ ಬರುತ್ತಿಲ್ಲ. ಹೀಗಾಗಿ ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ಸಾಗಾಟ ಕಡಿಮೆಯಾಗಿರುವುದರಿಂದ ಬೆಲೆ ಏರಿಕೆಯಾಗುತ್ತಿದೆ' ಎಂದು ತರಕಾರಿ ಮಾರಾಟ ಸಂಘದ ಅಧ್ಯಕ್ಷ ಗೋಪಿ 'ಡೆಕ್ಕನ್ ಹೆರಾಲ್ಡ್'ಗೆ ತಿಳಿಸಿದ್ದಾರೆ.

'ಪ್ರತಿ ದಿನ ಎರಡು ಟನ್‌ಗಳಷ್ಟು ಟೊಮೆಟೊ ಬೆಳೆ ಪೂರೈಕೆಯಾಗುತ್ತದೆ. ಆದರೆ ಒಂದು ವಾರದಿಂದ ಟೊಮೆಟೊ ಸಾಗಣೆ ಮಟ್ಟ ಕಡಿಮೆಯಾಗಿದೆ. ಇದರಿಂದಾಗಿ ಬೆಲೆ ಏರಿಕೆಯಾಗಿದೆ. ದೇ ರೀತಿ ಇನ್ನೂ ಕೆಲವು ದಿನ ಮಳೆ ಮುಂದುವರೆದರೆ ಟೊಮೆಟೊ ಬೆಲೆ ಇನ್ನಷ್ಟು ಏರಿಕೆಯಾಗುವುದು ಖಚಿತ. ಕೆ.ಜಿ.ಗೆ ಗರಿಷ್ಠ 100 ರೂ ತಲುಪಬಹುದು. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ' ಎಂದು ವರ್ತಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಟೊಮೆಟೊ ಬೆಲೆ ಕಳೆದ ವಾರ ದಿಢೀರ್ ಏರಿಕೆಯಾಗಿದೆ. ಕೆ.ಜಿ.ಗೆ ಕನಿಷ್ಠ 30 ರೂ ಬೆಲೆಯಿಂದ ಗರಿಷ್ಠ 70ರೂ ಬೆಲೆವರೆಗೂ ಮಾರಾಟವಾಗುತ್ತಿದೆ. ಮಳೆ ಮುಂದುವರೆದರೆ ಈ ಬೆಲೆ 100 ರೂ ವರೆಗೂ ತಲುಪುವ ಅಂದಾಜು ಮಾಡಲಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications