ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶುಕ್ರವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ತತ್ತರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23: ಶುಕ್ರವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್‌ಪಾಸ್‌ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ರಾತ್ರಿ ನಿದ್ದೆ ಇಲ್ಲದೆ ಪರದಾಡುವಂತಾಗಿದೆ.

ರಾತ್ರಿ ಸುರಿದ ಗುಡುಗು, ಮಿಂಚು ಸಹಿತ ಭಾರೀ ಮಳೆಗೆ ಜನಜೀವನ ತತ್ತರಿಸಿ ಹೋಗಿದೆ. ನಗರದ ಮೆಜೆಸ್ಟಿಕ್ ರೈಲ್ವೇ ಅಂಡರ್‌ಪಾಸ್‌, ವಿಂಡ್ಸನ್ ಬ್ರಿಡ್ಜ್, ಸೆವೆನ್ ಮಿಸಿಸ್ಟರ್ ಕ್ವಾಟ್ರಸ್ ರಸ್ತೆ ಜಲಾವೃತಗೊಂಡಿತ್ತು. ಮಂತ್ರಿಮಾಲ್ ಬಳಿ ರಸ್ತೆ ಕೆರೆಯಂತಾಗಿತ್ತು. ಪರಿಣಾಮ ಐಶಾರಾಮಿ ಬಿಎಂಡಬ್ಲ್ಯೂ ಕಾರು, ಆಟೋಗಳು ಸೇರಿ ಐದಾರು ವಾಹನಗಳು ನೀರಲ್ಲಿ ಸಿಲುಕಿ ಕೆಟ್ಟು ನಿಲ್ಲುವಂತಾಗಿದೆ.

ರಾತ್ರಿ ವೇಳೆ ನೀರಲ್ಲಿ ಕೆಟ್ಟು ನಿಂತಿದ್ದ ಈ ವಾಹನಗಳನ್ನು ಟೋಯಿಂಗ್ ಮಾಡಲಾಯಿತು. ಕೆ.ಆರ್. ಪುರಂನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ರಾತ್ರಿ ಇಡೀ ಜನ ನಿದ್ದೆ ಇಲ್ಲದೆ ಮನೆಯ ಒಳಭಾಗದಲ್ಲಿದ್ದ ನೀರನ್ನು ಹೊರ ಹಾಕುವುದರಲ್ಲಿ ಕಾಲ ಕಳೆದರು.

Torrential Rain Overnight In Bengaluru City: Chaotic Of Peoples Life

ಸಿಲಿಕಾನ್ ಸಿಟಿಯಲ್ಲಿ ರಚ್ಚೆ ಹಿಡಿದಂತೆ ಮಳೆ ಸುರಿದಿದ್ದು, ಅಂಡರ್‌ಪಾಸ್ ರಸ್ತೆಗಳು ಕೆರೆಯಾಗಿ ಮಾರ್ಪಟ್ಟಿದ್ದವು. ವಿಂಡ್ಸನ್ ಮ್ಯಾನರ್ ಬ್ರಿಡ್ಜ್ ಹಾಗೂ ರೇಸ್‌ಕೋರ್ಸ್ ರಸ್ತೆ ಬಳಿಯಿರುವ ಅಂಡರ್‌ಪಾಸ್ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ರಾಜಕಾಲುವೆ ನೀರು ಭಾರಿ ಪ್ರಮಾಣದ ನೀರು ರಸ್ತೆಗೆ ನುಗ್ಗಿದ ಪರಿಣಾಮ ರಸ್ತೆಗಳು ಕೆರೆಯಂತಾಗಿದ್ದವು. ಗಾಯತ್ರಿನಗರ ವಾರ್ಡ್‌ನ ಲಕ್ಷ್ಮೀ ನಾರಾಯಣಪುರ ಏರಿಯಾದ 15ರಿಂದ 20 ಮನೆಗಳಿಗೆ ಮಳೆ ನೀರು ನುಗ್ಗಿದೆ.

ಪ್ರತಿ ಬಾರಿ ಮಳೆ ಬಂದರೆ ಇದೇ ಗತಿಯಾಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳಿಗೆ ಎಷ್ಟು ಹೇಳಿದರೂ ಏನೂ ಪ್ರಯೋಜನ ಇಲ್ಲ. ಇಲ್ಲಿ ಚೇಂಬರ್ ಸಮಸ್ಯೆ ಇದೆ, ಹೊಸ ಚೇಂಬರ್ ಮಾಡಿದಾಗಿಂದಲೂ ಮನೆಗಳಿಗೆ ನೀರು ನುಗ್ಗುವುದು ಹೆಚ್ಚಾಗಿದೆ ಎಂದು ಆರೋಪಿಸಿದರು.

ಕಳೆದ ಎರಡು ವರ್ಷಗಳಿಂದ ಮಳೆ ನೀರು ಸಮಸ್ಯೆ ಎದುರಿಸುತ್ತಿದ್ದೇವೆ. ಚುನಾವಣೆ ಸಮಯದಲ್ಲಿ ಬರುತ್ತಾರೆ, ಓಟ್ ಹಾಕಿಸ್ಕೊಂಡು ಹೋಗ್ತಾರೆ. ಆದರೆ ಯಾವ ಅಧಿಕಾರಿಗಳು, ರಾಜಕೀಯ ನಾಯಕರು ಸಮಸ್ಯೆ ಬಗೆಹರಿಸುವುದಿಲ್ಲ ಎಂದು ದೂರಿದರು.

Torrential Rain Overnight In Bengaluru City: Chaotic Of Peoples Life

ಅಕ್ಟೋಬರ್ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಪರಿಣಾಮ ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

ಬೆಂಗಳೂರು ವಾತಾವರಣ
ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಟಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

ಹವಾಮಾನ ಸುದ್ದಿ ನೋಡ್ಬೇಕು ಅಂತಾ ಕೂತ್ರೆ Tvಯಲ್ಲಿ ಬಂದಿದ್ದು ಅಶ್ಲೀಲ ದೃಶ್ಯ | Oneindia Kannada

English summary
Heavy rain lashed in bengaluru city on Friday overnight, submerged of Underpass Roads.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X