Get Updates
Get notified of breaking news, exclusive insights, and must-see stories!

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರವಾಸ ಭಾಗ್ಯ

Recommended Video

      ಎಲ್ಲಾ ವರ್ಗದ ಸರ್ಕಾರೀ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರೀ ಪ್ರವಾಸ ಭಾಗ್ಯ | Oneindia Kannada

      ಬೆಂಗಳೂರು, ಆಗಸ್ಟ್ 27: ರಾಜ್ಯ ಸರ್ಕಾರ ಈ ವರ್ಷ ಎಂಟನೇ ತರಗತಿ ಮೇಲ್ಪಟ್ಟ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ.

      ಎಂಟನೇ ತರಗತಿ ಮೇಲ್ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಗಳ 30ಸಾವಿರ ಮಕ್ಕಳು ಹಾಗೂ ಹತ್ತು ಸಾವಿರ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕಳುಹಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಈ ವರ್ಷ 12 ಕೋಟಿ ರೂಗಳನ್ನು ಪ್ರವಾಸಕ್ಕಾಗಿ ಮೀಸಲಿರಿಸಿದೆ.

      ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಡಿ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಬಾರಿ ಪ್ರವಾಸೋದ್ಯಮ ಇಲಾಖೆಯಿಂದಲೇ ಶಾಲಾ ಮಕ್ಕಳ ಪ್ರವಾಸ ಕರ್ನಾಟಕ ದರ್ಶನ ಯೋಜನೆಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಪ್ರವಾಸ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ.

      Tourism dept to conduct Karnataka Darshan for govt school students

      ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕೇವಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರವಾಸ ಯೋಜನೆಯನ್ನು ರೂಪಿಸಿದಾಗ ಎಲ್ಲಾ ಪಕ್ಷದ ಶಾಸಕರಿಂದ ತೀವ್ರ ವಿರೋಧ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಸಾಸಕರನ್ನು ಸಮಾಧಾನ ಪಡಿಸಲು ಯೋಜನೆಯನ್ನು ಪುನರ್ ರೂಪಿಸಲಾಗಿತ್ತು.

      ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು ಪ್ರವಾಸೋದ್ಯಮ ಇಲಾಖೆಗೆ ನೀಡಲಾಗಿತ್ತು.ಇದೀಗ ಪ್ರವಾಸೋದ್ಯಮ ಇಲಾಖೆಯಿಂದಲೇ ನೇರವಾಗಿ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳೂ ಸೇರಿದಂತೆ ಪರಿಶಿಷ್ಟ ಜಾತ, ಪರಿಶಿಷ್ಟ ವರ್ಗದ ಮಕ್ಕಳಿಗೆ ಉಚಿತ ಪ್ರವಾಸ ಭಾಗ್ಯ ದೊರೆಯಲಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+