ಪ್ರವಾಸಿ ಗೈಡ್‌ಗಳಿಗೆ ಕೋವಿಡ್ ಪರಿಹಾರ; ಸಿ.ಪಿ. ಯೋಗೇಶ್ವರ್

ಬೆಂಗಳೂರು, ಜೂನ್ 14: ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಶೀಘ್ರದಲ್ಲಿಯೇ ಈ ಕುರಿತು ಸರ್ಕಾರದಿಂದ ಆದೇಶ ಬರಲಿದೆ ಎಂದು ತಿಳಿಸಿದ್ದಾರೆ.

"ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್‌ಗಳು ನೋಂದಣಿಯಾಗಿದ್ದಾರೆ. ಅವರಿಗೆ ಕೊರೊನಾ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದೇವೆ. ಪ್ರತಿಯೊಬ್ಬರಿಗೂ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಪಾಯಿಗಳನ್ನು ನೀಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ," ಎಂದು ಯೋಗೇಶ್ವರ್ ತಿಳಿಸಿದ್ದಾರೆ.

Tourism Minister CP Yogeshwar Decided To Announce Rs 5000 Covid Relief Package To Tourist Guides

ಸಭೆಯಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿ ರೂಪಿಸಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+