• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರವಾಸಿ ಗೈಡ್‌ಗಳಿಗೆ ಕೋವಿಡ್ ಪರಿಹಾರ; ಸಿ.ಪಿ. ಯೋಗೇಶ್ವರ್

|
Google Oneindia Kannada News

ಬೆಂಗಳೂರು, ಜೂನ್ 14: ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಶೀಘ್ರದಲ್ಲಿಯೇ ಈ ಕುರಿತು ಸರ್ಕಾರದಿಂದ ಆದೇಶ ಬರಲಿದೆ ಎಂದು ತಿಳಿಸಿದ್ದಾರೆ.

Breaking; ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರBreaking; ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ

"ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್‌ಗಳು ನೋಂದಣಿಯಾಗಿದ್ದಾರೆ. ಅವರಿಗೆ ಕೊರೊನಾ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದೇವೆ. ಪ್ರತಿಯೊಬ್ಬರಿಗೂ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಪಾಯಿಗಳನ್ನು ನೀಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ," ಎಂದು ಯೋಗೇಶ್ವರ್ ತಿಳಿಸಿದ್ದಾರೆ.

   ರಾಬರ್ಟ್ ಸಿನಿಮಾ ನೋಡಿ ನನಗಿಂತ ಚೆನ್ನಾಗ್ ಮಾಡಿದ್ಯಾ ಅಂತ ಹೊಗಳಿದ್ರು | Oneindia Kannada

   ಸಭೆಯಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿ ರೂಪಿಸಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.

   English summary
   Tourism Minister CP Yogeshwar decided to announce Rs 5000 covid relief package to tourist Guides,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X