ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್‌ನಿಂದ ಪ್ರವಾಸೋದ್ಯಮಕ್ಕೆ ಶೇಕಡಾ 100ರಷ್ಟು ನಷ್ಟ

|
Google Oneindia Kannada News

ಬೆಂಗಳೂರು, ಜೂನ್ 6: ಸುಮಾರು ಮೂರು ತಿಂಗಳ ಲಾಕ್‌ಡೌನ್‌ನಿಂದ ಬಹುತೇಕ ಎಲ್ಲ ಕ್ಷೇತ್ರಗಳಿಗೆ ನಷ್ಟ ಆಗಿದೆ. ಆದರೆ, 'ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರ ಶೇಕಡಾ 100 ರಷ್ಟು ನಷ್ಟ ಅನುಭವಿಸಿದೆ' ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಿ ಸಿ.ಟಿ.ರವಿ ಮಾತುಕತೆ ನಡೆಸಿದ್ದಾರೆ.

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆ

'ರಾಜ್ಯದಲ್ಲಿ ಸುಮಾರು‌ 35 ಲಕ್ಷ ಮಂದಿ ಪ್ರವಾಸೋದ್ಯಮ ಕ್ಷೇತ್ರವನ್ನು ಅವಲಂಭಿಸಿದ್ದಾರೆ. ಲಾಕ್‌ಡೌನ್‌ನಿಂದ ಶೇಕಡಾ 100 ರಷ್ಟು ನಷ್ಟ ಅನುಭವಿಸಿದೆ. ಆದ್ರೆ ರಾಜ್ಯದಲ್ಲಿ ಪ್ರವಾಸಿ ತಾಣಗಳು ಸುರಕ್ಷಿತವಾಗಿವೆ. ಇದಕ್ಕೆ ಸಂಬಂಧಪಟ್ಟ ಹಾಗೆ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿದ್ದೇವೆ'' ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

 Tourism Suffered 100% of loss amid coronavirus Lockdown

''ಟೂರಿಸ್ಟ್ ವಾಹನಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇಕಡಾ 100 ರಷ್ಟು ವಾಹನ ತೆರಿಗೆ ಘೋಷಣೆ ಮಾಡಲಾಗಿತ್ತು. ಈಗ ಜೂನ್ ತಿಂಗಳಲ್ಲಿ ಶೇಕಡಾ 50 ರಷ್ಟು ವಾಹನ ತೆರಿಗೆ ಕಡಿತ ಮಾಡಲು ನಿರ್ಧಾರ ಮಾಡಿದ್ದೇವೆ. ಕರ್ನಾಟಕಕ್ಕೆ ಬರುವ ಇತರೆ ರಾಜ್ಯಗಳ ವಾಹನಗಳ ಎಂಟ್ರಿ ಟ್ಯಾಕ್ಸ್ ವಿನಾಯಿತಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಇರುವ ವಿನಾಯಿತಿಯನ್ನು ಅಧ್ಯಯನ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ''. ಎಂದು ಮಾಹಿತಿ ನೀಡಿದ್ದಾರೆ.

''ಇತರೆ ಭಾಷೆಗಳ ಚಿತ್ರಗಳ ಚಿತ್ರೀಕರಣಕ್ಕೆ ರಾಜ್ಯದಲ್ಲಿ ಅವಕಾಶ ಕಲ್ಪಿಸಲು ವಿಶೇಷ ಆಸ್ಥೆ ವಹಿಸಲು ತೀರ್ಮಾನ ಮಾಡಿದ್ದೇವೆ. ಕೊಪ್ಪಳ ಸಮೀಪದ ಬಹದ್ದೂರ ಬಾಂಡ ಗಾಮದಲ್ಲಿ ಬಂಜಾರ ಹೆರಿಟೇಜ್ ವಿಲೇಜ್ ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಬಂಜಾರ ಅಭಿವೃದ್ಧಿ ನಿಗಮ ಮತ್ತು ಕೆ ಎಸ್ ಟಿ ಡಿಸಿ ಸಹಯೋಗದಲ್ಲಿ ಈ ಯೋಜನೆ ಸಾಕಾರ ಆಗಲಿದೆ. ಜತೆಗೆ, ಆದಿವಾಸಿ ಕಲ್ಚರಲ್ ಹೆರಿಟೇಜ್ ಅನ್ನು ರಾಮನಗರದ ಜಾನಪದ ಲೋಪದಲ್ಲಿ ಸ್ಥಾಪನೆ ಮಾಡಲು ನಿರ್ಣಯ ಮಾಡಲಾಗಿದೆ'' ಎಂದು ತಿಳಿಸಿದ್ದಾರೆ.

English summary
Karnataka tourism Minister CT Ravi said that 'Tourism is Suffered 100% of loss amid coronavirus Lockdown'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X