ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ವಿಷಯುಕ್ತ ತ್ಯಾಜ್ಯ ನೀರು ಹರಿಸದಂತೆ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 29; ಅರ್ಕಾವತಿ ನದಿ ಪಾತ್ರದ ಕೆರೆರೆಗಳಿಗೆ ವಿಷಯುಕ್ತ ತ್ಯಾಜ್ಯ ನೀರು ಹರಿಸದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ಎಚ್ಚರಿಕೆ ನೀಡಿದ್ದಾರೆ. ವಿಷಯುಕ್ತ ತ್ಯಾಜ್ಯ ನೀರು ಹರಿದು ಬರುತ್ತಿರುವ ಕುರಿತು ಜನರು ದೂರು ಕೊಟ್ಟಿದ್ದರು.

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ನಗರದ ಒಳಚರಂಡಿ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಿಷಯುಕ್ತ ತ್ಯಾಜ್ಯ ಬಿಡುತ್ತಿರುವ ಬಗ್ಗೆ ಜನರು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ದೊಡ್ಡಬಳ್ಳಾಪುರ ನಗರದ ನಾಗರಕೆರೆ ಹಾಗೂ ತಾಲೂಕಿನ‌‌ ಚಿಕ್ಕತುಮಕೂರು ಎಸ್‌ಟಿಪಿ ಘಟಕಕ್ಕೆ ಭೇಟಿ‌ ನೀಡಿ ಪರಿಶೀಲಿಸಿದರು.

 ಸಿದ್ದರಾಮಯ್ಯ ಅವರ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ತನಿಖೆ ನಡೆಸಲಾಗುವುದು: ಕಟೀಲ್ ಸಿದ್ದರಾಮಯ್ಯ ಅವರ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ತನಿಖೆ ನಡೆಸಲಾಗುವುದು: ಕಟೀಲ್

ಪರಿಶೀಲನೆ ವೇಳೆ ಜಿಲ್ಲಾಧಿಕಾರಿಗಳು ನಾಗರಕೆರೆಗೆ ಏಳೆಂಟು ಕಡೆ ಮನೆಗಳ ಯುಜಿಡಿ‌ ನೀರು, ಮಗ್ಗಗಳ ಡೈಯಿಂಗ್ ನೀರು ಬಂದು ಸೇರುತ್ತಿದೆ. 2008ರಲ್ಲಿ ಕೆರೆ ಮಧ್ಯಭಾಗದಲ್ಲಿ ಅವೈಜ್ಞಾನಿಕವಾಗಿ ಒಳಚರಂಡಿ ಪೈಪ್‌ಲೈನ್ ನಿರ್ಮಿಸಲಾಗಿದೆ. ಇದರಿಂದಲೂ ಯುಜಿಡಿ‌ ನೀರು ನೇರವಾಗಿ ಕೆರೆಗೆ ಸೇರುತ್ತಿದೆ. ಈ ಬಗ್ಗೆ‌ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ‌ ಸೂಚಿಸಿದರು.

ಐದು ದಶಕಗಳ ಬಳಿಕ ಅರ್ಕಾವತಿ ನದಿಗೆ ಜೀವಕಳೆ! ಐದು ದಶಕಗಳ ಬಳಿಕ ಅರ್ಕಾವತಿ ನದಿಗೆ ಜೀವಕಳೆ!

ಇನ್ನು 175 ಎಕರೆ ವಿಸ್ತೀರ್ಣದ ನಾಗರಕೆರೆಯಲ್ಲಿ ಕೆಲವೆಡೆ ಒತ್ತುವಾರಿಯಾಗಿದೆ. ಇದನ್ನು ಪರಿಶೀಲಿಸಿ ತೆರವಿಗೆ ಕ್ರಮ ಕೈಗೊಳ್ಳಬೇಕೆಂದು ಎಂದು ಸಣ್ಣ‌ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು. ಈಗಾಗಲೇ ಕೆರೆಯ ಸರ್ವೇ ಮಾಡಲಾಗಿದೆ. ಒತ್ತುವರಿಯಾಗಿರುವ ಕಡೆ ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು‌ ಅಧಿಕಾರಿಗಳು ಹೇಳಿದರು. 20 ಎಕರೆಗೂ ಹೆಚ್ಚು ಜಾಗ ಒತ್ತುವರಿಯಾಗಿದೆ ಎಂದು ಅಂದಾಜಿಸಲಾಗಿದೆ.

ಅರ್ಕಾವತಿ ಬಡಾವಣೆ: ಮೂಲೆ ನಿವೇಶನ ಹರಾಜಿಗೆ ಹೈಕೋರ್ಟ್ ಬ್ರೇಕ್ಅರ್ಕಾವತಿ ಬಡಾವಣೆ: ಮೂಲೆ ನಿವೇಶನ ಹರಾಜಿಗೆ ಹೈಕೋರ್ಟ್ ಬ್ರೇಕ್

ಪಕ್ಷಿ ಪ್ರಬೇಧಗಳ ಆವಾಸ ಸ್ಥಾನ

ಪಕ್ಷಿ ಪ್ರಬೇಧಗಳ ಆವಾಸ ಸ್ಥಾನ

ನಾಗರಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ 100ಕ್ಕೂ ಹೆಚ್ಚು ಪ್ರಬೇಧದ ಪಕ್ಷಿಗಳಿವೆ. ನೂರಾರು‌ ಜಾತಿಯ ವಲಸೆ ಪಕ್ಷಿಗಳು ಆಗಮಿಸುತ್ತವೆ. ಇಂತಹ ಜೀವವೈವಿದ್ಯ ತಾಣವನ್ನು ಸಂರಕ್ಷಿಸಬೇಕು ಎಂದು ಯುವ ಸಂಚಲನ ಅಧ್ಯಕ್ಷ ಚಿದಾನಂದ್ ಜಿಲ್ಲಾಧಿಕಾರಿಗಳ ಗಮನ‌ ಸೆಳೆದರು.

ಜಿಲ್ಲಾಧಿಕಾರಿ ಆರ್. ಲತಾ ಅವರು ತ್ವರಿತಗತಿಯಲ್ಲಿ ಕೆರೆ ಸಂರಕ್ಷಣೆಗೆ ಕ್ರಮ ಕೈಗೊಳ್ಳುತ್ತೇವೆ. ಡಿಪಿಆರ್ ಸಿದ್ಧಪಡಿಸುವಾಗ ತಜ್ಞರ ಅಭಿಪ್ರಾಯ, ಸಲಹೆ ಸೂಚನೆ ಸ್ವೀಕರಿಸಬೇಕು ಎಂದು ನಗರಸಭೆ ಆಯುಕ್ತ ಶಿವಶಂಕರ್‌ಗೆ ಸೂಚಿಸಿದರು.

ಅರ್ಕಾವತಿ ಪಾತ್ರದ ಚಿಕ್ಕತುಮಕೂರು, ದೊಡ್ಡ ತುಮಕೂರು ಕೆರೆಗಳು‌ ಸಂಪೂರ್ಣ‌ ಕಲುಷಿತವಾಗಿದ್ದು, ಜಲಮೂಲ‌ ಉಳಿವಿಗೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಲಾಯಿತು.

ಸಂಸ್ಕರಿಸದಿದ್ದರೆ ಫ್ಯಾಕ್ಟರಿ ಬಂದ್ ಮಾಡಿ

ಸಂಸ್ಕರಿಸದಿದ್ದರೆ ಫ್ಯಾಕ್ಟರಿ ಬಂದ್ ಮಾಡಿ

ಬಣ್ಣ ಹಾಗೂ ರಸಾಯನಿಕ ಕೈಗಾರಿಕೆಗಳು ಹೊರ ಬಿಡುತ್ತಿರುವ ವಿಷಯುಕ್ತ ನೀರಿನಿಂದ ಕೆರೆಗಳು‌ ಸಂಪೂರ್ಣ ಮಲಿನಗೊಂಡಿವೆ. ಕೈಗಾರಿಕೆಗಳು ಮೂಲದಲ್ಲಿಯೇ ತ್ಯಾಜ್ಯ ನೀರು ಸಂಸ್ಕರಿಸಿ‌ ಕೆರೆಗೆ ಬಿಡಬೇಕು. ಉದಾಸೀನ ಮಾಡಿ ಜಲಮೂಲ ಹಾಳು ಮಾಡುವ ಕೈಗಾರಿಕೆಗಳ ವಿರುದ್ಧ ಕ್ರಮ‌ ಜರುಗಿಸಿ, ಬಂದ್ ಮಾಡಿಸಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರದ 26 ವಾರ್ಡ್‌ಗಳಲ್ಲಿ ಮಾತ್ರ ಯುಜಿಡಿ‌‌ ಸಂಪರ್ಕವಿದೆ. ಉಳಿದ ಐದು ವಾರ್ಡ್‌ಗಳಲ್ಲಿ ಇಲ್ಲ. ಈಗಿರುವ ಯುಜಿಡಿ‌ ಸಂಪರ್ಕವೂ ಅಸಮರ್ಪಕವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಡಿಪಿಆರ್ ಸಿದ್ದಪಡಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಎಂದು ದೂರು

ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಎಂದು ದೂರು

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಕೈಗಾರಿಕೆಗಳು ತ್ಯಾಜ್ಯ ನೀರನ್ನು ಕೆರೆಗೆ ಬಿಟ್ಟು ಸಿಕ್ಕಿ ಹಾಕಿಕೊಂಡಿದ್ದಾರೆ. ಆದರೆ ಅವರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಗ್ರಾಮಸ್ಥರು ದೂರಿದರು.

ಕೆಲ ದಿನಗಳ ಹಿಂದೆ ಜೋದಾನಿ ಕಂಪನಿ ಕಲುಷಿತ ನೀರು ಬಿಟ್ಟ ಕಾರಣ ಜಲಚರಗಳು ಸತ್ತಿದ್ದವು. ಅವರ ವಿರುದ್ದ ಇದುವರೆಗೂ ಕ್ರಮ ಕೈಗೊಂಡಿಲ್ಲ. ಅನುಗ್ರಹ ಕೆಮಿಕಲ್ಸ್ ಕಂಪನಿ ಕೂಡ ವಿಷಯುಕ್ತ ನೀರು ಹರಿಸುತ್ತಿದೆ ಜನರು ಆರೋಪಿಸಿದರು.

ಬಾಶೆಟ್ಟಿಹಳ್ಳಿಯಲ್ಲಿ 312 ಕೈಗಾರಿಕೆಗಳಿವೆ. ಕೆಐಎಡಿಬಿ‌ ಬಳಿ ಜಮೀನು ಇದ್ದರೆ 3-4 ಎಕರೆ ಪ್ರದೇಶದಲ್ಲಿ ಪ್ರತ್ಯೇಕ ಟ್ರೀಟ್ ಮೆಂಟ್ ಪ್ಲಾಂಟ್ ಮಾಡಬಹುದು. ಈ ಬಗ್ಗೆ ಗಮನ ಹರಿಸಿ ಎಂದು ತಹಶೀಲ್ದಾರ್ ಮೋಹನಕುಮಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಐಐಎಸ್ಸಿಗೆ ನೀರಿನ ಸ್ಯಾಂಪಲ್ ಕಳುಹಿಸಿ

ಐಐಎಸ್ಸಿಗೆ ನೀರಿನ ಸ್ಯಾಂಪಲ್ ಕಳುಹಿಸಿ

ಬಾಶೆಟ್ಟಿಹಳ್ಳಿ ಸೇರಿದಂತೆ ಕಲುಷಿತಗೊಂಡಿರುವ ಕೆರೆ ವ್ಯಾಪ್ತಿಯ ಗ್ರಾಮಗಳಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳಿಂದ ಸ್ಯಾಂಪಲ್‌ಗಳನ್ನು ಐಐಎಸ್ಸಿಗೆ ರವಾನಿಸಲು‌‌ ಸೂಚಿಸಿದ್ದೇನೆ. ಮನುಷ್ಯನಿಗೆ ಬದುಕಲು ಅತ್ಯಗತ್ಯವಾಗಿ ಬೇಕಾದ ನೀರಿನ‌ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು. ಐಐಎಸ್ಸಿಯಲ್ಲಿ ಹಲವು‌ ಮಾನದಂಡಗಳಲ್ಲಿ ನೀರಿನ‌ ಪರೀಕ್ಷೆ ನಡೆವುದರಿಂದ ನಿಖರ ಫಲಿತಾಂಶ ಸಿಗಲಿದೆ. ವರದಿ ಪಡೆದ‌ ನಂತರ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು‌ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

English summary
Villagers fear on toxic water to lake at Arkavathi river catchment areas. R. Latha deputy commissioner of Bengaluru Rural inspected the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X