ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Vikram Kirloskar : ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ನಿಧನ

|
Google Oneindia Kannada News

ಭಾರತದ ಆಟೋಮೋಟಿವ್ ಉದ್ಯಮದ ದಿಗ್ಗಜ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.

ವಿಕ್ರಮ್ ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

Toyota Kirloskar Motor Vice Chairperson Vikram Kirloskar passed away

"ನವೆಂಬರ್ 29, 2022 ರಂದು ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ. ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವಿನಂತಿಸುತ್ತೇವೆ" ಎಂದು ಮಂಗಳವಾರ ತಡರಾತ್ರಿ ಕಂಪನಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

"ನಾವು ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮ ಸಹಾನುಭೂತಿಗಳನ್ನು ವ್ಯಕ್ತಪಡಿಸುತ್ತೇವೆ. 30 ನವೆಂಬರ್ 2022 ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತಿಮ ಗೌರವವನ್ನು ಸಲ್ಲಿಸಬಹುದು" ಎಂದು ಕಂಪನಿ ಟ್ವೀಟ್‌ನಲ್ಲಿ ತಿಳಿಸಿದೆ.

ಬೆಂಗಳೂರಿನ ಪ್ರಧಾನ ಕಛೇರಿಯ ಬಯೋಫಾರ್ಮಾಸ್ಯುಟಿಕಲ್ಸ್ ಕಂಪನಿ ಬಯೋಕಾನ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್-ಶಾ, ವಿಕ್ರಮ್ ಅವರ ಆಘಾತಕಾರಿ ನಿಧನದಿಂದ ಜರ್ಜರಿತರಾಗಿದ್ದಾರೆ. ''ಅವರು ಆತ್ಮೀಯ ಸ್ನೇಹಿತರಾಗಿದ್ದರು, ನಾನು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ" ಎಂದು ಬರೆದಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಉದ್ಯಮ ವಲಯದ ಗಣ್ಯರು, ಸಮಾಜದ ಹಲವು ಕ್ಷೇತ್ರಗಳ ದಿಗ್ಗಜರು ಸಂತಾಪ ಸೂಚಿಸಿದ್ದಾರೆ. ಕಿರ್ಲೋಸ್ಕರ್ ಅವರ ನಿಧನಕ್ಕೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಂತಾಪ ವ್ಯಕ್ತಪಡಿಸಿದ್ದಾರೆ.

English summary
India's automotive industry stalwart and Toyota Kirloskar Motor vice chairperson Vikram S Kirloskar died on Tuesday late night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X