• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟ್ರ್ಯಾಕ್ಟರ್ ಮೆರವಣಿಗೆ: ಬೆಂಗಳೂರಲ್ಲಿ ಟ್ರಾಫಿಕ್ ಜಾಮ್ ಅಲರ್ಟ್

|

ಬೆಂಗಳೂರು, ಜನವರಿ 25: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಂಡಿವೆ. ರಾಜ್ಯದ ವಿವಿಧೆಡೆಗಳಿಂದ ರೈತರು ಟ್ರ್ಯಾಕ್ಟರ್ ಮೂಲಕ ಬೆಂಗಳೂರಿಗೆ ಆಗಮಿಸಲು ಸಜ್ಜಾಗಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಗಳೂರಲ್ಲಿ ಅನುಮತಿ ನೀಡಿಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. ಆದರೆ, 10 ಸಾವಿರಕ್ಕೂ ಅಧಿಕ ವಾಹನಗಳು ಬೆಂಗಳೂರಿಗೆ ಬರಲು ಸಜ್ಜಾಗಿವೆ.

ರೈತರ ಟ್ರ್ಯಾಕ್ಟರ್ ರ‍್ಯಾಲಿ ವಿರುದ್ಧದ ಅರ್ಜಿ ವಾಪಸ್ ಪಡೆದ ಕೇಂದ್ರರೈತರ ಟ್ರ್ಯಾಕ್ಟರ್ ರ‍್ಯಾಲಿ ವಿರುದ್ಧದ ಅರ್ಜಿ ವಾಪಸ್ ಪಡೆದ ಕೇಂದ್ರ

ಟ್ರಾಫಿಕ್ ಜಾಮ್ ಸಾಧ್ಯತೆ
ಜನವರಿ 26ರಂದು ತುಮಕೂರು ರಸ್ತೆ ನೈಸ್ ಜಂಕ್ಷನ್, ಗೊರಗುಂಟೇಪಾಳ್ಯ, ಯಶವಂತಪುರ, ಮಲ್ಲೇಶ್ವರ, ಆನಂದರಾವ್ ವೃತ್ತ, ಫ್ರೀಡಂಪಾರ್ಕ್ ಈ ಮಾರ್ಗದಲ್ಲಿ ಟ್ರ್ಯಾಕ್ಟರ್ ಸಂಚಾರವಿರಲಿದೆ ಹೀಗಾಗಿ ಈ ಮಾರ್ಗದಲ್ಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರಲಿದ್ದು, ವಾಹನ ಸವಾರರು ಈ ಬಗ್ಗೆ ಗಮನಹರಿಸಬಹುದು.

ಇದಲ್ಲದೆ, ಮೈಸೂರಿನಿಂದ ಜನವರಿ 25ರ ಸಂಜೆ ವೇಳೆಗೆ ಕೆಲ ರೈತ ಸಂಘಟನೆಗಳು ಟ್ರ್ಯಾಕ್ಟರ್ ಮೆರವಣಿಗೆ ಹೊರಡಲಿವೆ. ಹೀಗಾಗಿ, ಮೈಸೂರು ರಸ್ತೆ ಭಾಗದ ಸವಾರರು ಟ್ರಾಫಿಕ್ ಜಾಮ್ ಎದುರಿಸಲು ಸಜ್ಜಾಗಬೇಕಿದೆ.

   ಲಸಿಕೆ ಬಗ್ಗೆ ಅಪನಂಬಿಕೆ ಬೇಡ-Vinay Guruji | Oneindia Kannada

   ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಮೈಸೂರು ರಸ್ತೆ ಹಾಗೂ ಹೊಸೂರು ರಸ್ತೆ ಮೂಲಕವೂ ಟ್ರ್ಯಾಕ್ಟರ್ ಮೆರವಣಿಗೆ ನಿರೀಕ್ಷೆಯಿದ್ದು, ಬೆಂಗಳೂರಿನ ಬಹುತೇಕ ಪ್ರವೇಶ ಮಾರ್ಗಗಳು ಸಂಚಾರ ದಟ್ಟಣೆಯನ್ನು ಎದುರಿಸುವ ಸಾಧ್ಯತೆಗಳಿವೆ.

   English summary
   Tractor Rally by Farmers: Traffic Congestion alert in this areas of Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X