Traffic Advisory: ಫಲಪುಷ್ಪ ಪ್ರದರ್ಶನ: ಲಾಲ್‌ಬಾಗ್ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ
ಬೆಂಗಳೂರು, ಜನವರಿ 16: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ರಾಜ್ಯ ತೋಟಗಾರಿಕೆ ಇಲಾಖೆ ವತಿಯಿಂದ 12 ದಿನಗಳ ಕಾಲ 217ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನವು ಜನವರಿ 16 ಗುರುವಾರ ಅಂದರೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಪ್ರಯುಕ್ತ ಲಾಲ್‌ಬಾಗ್ ಸುತ್ತಮುತ್ತ ಓಡಾಡುವ ವಾಹನ ಸವಾರರು ಸಂಚಾರ ಮಾರ್ಗ ಬದಲಾವಣೆ ಆಗಿರುವುದನ್ನು ಗಮನಿಸಿ ಓಡಾಡುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಜನವರಿ 16ರಿಂದ ರಿಂದ 27ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸುತ್ತಿದೆ. ಸುಮಾರು 8 ರಿಂದ 10 ಲಕ್ಷ ಪ್ರವಾಸಿಗರು, ಗಣ್ಯರು ಮತ್ತು ವಿದೇಶಿ ಪ್ರೇಕ್ಷಕರು, ಶಾಲಾ ಮಕ್ಕಳು ಈ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಲಿದ್ದಾರೆ. ಸುಗಮ ಸಂಚಾರಕ್ಕಾಗಿ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣೆ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಸಾರ್ವಜನಿಕರು ಈ ಕೆಳಗಿನ ಸಂಚಾರ ವ್ಯವಸ್ಥೆಗಳನ್ನು ಗಮನಿಸಿ ಓಡಾಡುವಂತೆ ಕೋರಲಾಗಿದೆ.

ಪಾರ್ಕಿಂಗ್ ಸ್ಥಳಗಳು ಯಾವುವು?
* ಡಾ.ಮಾರಿಗೌಡ ರಸ್ತೆ: ದ್ವಿಚಕ್ರ ವಾಹನಗಳ ಪಾರ್ಕಿಂಗ್‌ಗೆ ಅಲ್-ಅಮೀನ್ ಕಾಲೇಜು ಆವರಣ.
* ಕೆಎಚ್ ರಸ್ತೆ: ಶಾಂತಿನಗರ ಬಿಎಂಟಿಸಿ ಬಹುಮಹಡಿ ಪಾರ್ಕಿಂಗ್ ಸ್ಥಳವನ್ನು 2 ಮತ್ತು 4 ಚಕ್ರಗಳ ಪಾರ್ಕಿಂಗ್‌ಗೆ ಬಳಸಬಹುದು.
* ಡಾ.ಮಾರಿಗೌಡ ರಸ್ತೆ, ಹಾಪ್‌ಕಾಮ್ಸ್ ಪಾರ್ಕಿಂಗ್ ಸ್ಥಳವನ್ನು 2 ಮತ್ತು 4 ಚಕ್ರಗಳ ವಾಹನಗಳ ಪಾರ್ಕಿಂಗ್‌ಗೆ ಬಳಸಬಹುದು.
* ಜೆ.ಸಿ. ರಸ್ತೆ, ದ್ವಿಚಕ್ರ ವಾಹನ ಮತ್ತು 4 ಚಕ್ರ ವಾಹನಗಳ ಪಾರ್ಕಿಂಗ್‌ಗೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳ.
ಪಾರ್ಕಿಂಗ್ ನಿಷೇಧಿತ ಸ್ಥಳಗಳ ಪಟ್ಟಿ
* ಡಾ.ಮರಿಗೌಡ ರಸ್ತೆ: ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧ.
* ಕೆ.ಎಚ್ ರಸ್ತೆ: ಕೆ.ಎಚ್ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಡಬಲ್ ರಸ್ತೆಯ ಎರಡೂ ಬದಿಗಳಲ್ಲಿ ನಿಷೇಧ.
* ಲಾಲ್‌ಬಾಗ್ ರಸ್ತೆ: ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ.
* ಸಿದ್ದಯ್ಯ ರಸ್ತೆ: ಉರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12 ನೇ ಅಡ್ಡರಸ್ತೆ, ರಸ್ತೆಯ ಎರಡೂ ಬದಿಗಳು.
* ಬಿಟಿಎಸ್ ರಸ್ತೆ: ಬಿಎಂಟಿಸಿ ಜಂಕ್ಷನ್‌ನಿಂದ ಅಂಚೆ ಕಚೇರಿ ಕಡೆಗೆ ನೋ ಪಾರ್ಕಿಂಗ್.
* ಕೃಂಬಿಗಲ್ ರಸ್ತೆ ಎರಡೂ ಬದಿಗಳು.
* ಲಾಲ್‌ಬಾಗ್ ಪಶ್ಚಿಮ ದ್ವಾರದಿಂದ ಆರ್.ವಿ. ಶಿಕ್ಷಕರ ಕಾಲೇಜಿಗೆ.
* ಆರ್.ವಿ. ಶಿಕ್ಷಕರ ಕಾಲೇಜಿನಿಂದ ಅಶೋಕ ಪಿಲ್ಲರ್‌ಗೆ.
* ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ಕಡೆಗಿನ ರಸ್ತೆಯಲ್ಲಿ ನೋ ಪಾರ್ಕಿಂಗ್
ವಿಶೇಷ ಸೂಚನೆ
ಈ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ತಾವುಗಳು ನಮ್ಮ ಮೆಟ್ರೋ, ಬಿಎಂಟಿಸಿ, ಕ್ಯಾಬ್‌ಗಳು ಮುಂತಾದ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications