ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಿಶ್ಚಿಂತೆಯಿಂದ ತೆರಳಿ
ಬೆಂಗಳೂರು, ಆ, 20: ರಾಜಧಾನಿ ಸಂಚಾರ ಸಮಸ್ಯೆ ಪರಿಹರಿಸಲು ಮಹಾನಗರದ ವಿವಿಧ ಭಾಗಗಳಿಂದ ನೇರವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವಂತೆ 10 ರಿಂದ 15 ಫ್ಲೈ ಓವರ್ ನಿರ್ಮಾಣ ಮಾಡಲಾಗುವುದು ಎಂದು ವಾರ್ತಾ ಮತ್ತು ಮೂಲಸೌಕರ್ಯ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.(ಬಿಬಿಎಂಪಿಯೊಂದಿಗೆ ಸೇರಿ ಗೆಳತಿ ಮನೆ ರಸ್ತೆ ಸ್ವಚ್ಛಮಾಡಿ)
ಬಿಬಿಎಂಪಿ ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 'ಜಾಗತಿಕ ದೃಷ್ಟಿಕೋನದಿಂದ ಹೂಡಿಕೆ ತಾಣವಾಗಿ ಬೆಂಗಳೂರು' ಕಾರ್ಯಕ್ರಮದ ನಂತರ ಸುದ್ದಿಗಾರೊಂದಿಗೆ ಮಾತನಾಡಿ ವಿಷಯ ತಿಳಿಸಿದರು.

ಉದ್ಯಾನ ನಗರಿ, ಐಟಿ-ಬಿಟಿ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನೋಡಿದರೆ ಖೇದವಾಗುತ್ತದೆ. ಟ್ರಾಫಿಕ್ ಜಾಮ್ ತಡೆ ಉದ್ದೇಶದಿಂದ ನಗರದ ವೈಟ್ ಫೀಲ್ಡ್, ಐಟಿ ಪಾರ್ಕ್, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ವಿವಿಧ ಭಾಗಗಳಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವಂತೆ ಫ್ಲೈ ಓವರ್ ನಿರ್ಮಿಸಲಾಗುವುದು. ಈ ವಿಚಾರ ಪ್ರಾರಂಭದ ಹಂತದಲ್ಲಿದೆ ಎಂದು ಹೇಳಿದರು.
ಮುಂದಿನ ವರ್ಷ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು. ಇದಕ್ಕೆ ಪೂರಕವಾಗಿ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ವಿವಿಧ ರಾಷ್ಟ್ರದ ತಜ್ಞರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ವಿವರಿಸಿದರು.
ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಮಾತನಾಡಿ, ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು ಪ್ರತಿದಿನ ಅನೇಕ ಕಂಪನಿಗಳು ತಲೆ ಎತ್ತುತ್ತಿವೆ. ಉದ್ಯೋಗ ಅರಸಿ ಆಗಮಿಸುವ ಜನರಿಗೆ ವಸತಿ ಕೊರತೆ ಎದುರಾಗಬಾರದು. ರಿಯಲ್ ಎಸ್ಟೇಟ್ ಉದ್ಯಮಿಗಳು ಮುಂದೆ ಬಂದು ಬಂಡವಾಳ ಹೂಡಬೇಕು. ಇದರಿಂದ ಬಿಬಿಎಂಪಿಗೂ ಆದಾಯ ಬರಲಿದ್ದೂ ನಾಗರಿಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications