ಐಪಿಎಲ್ ಫೈನಲ್: ಭಾನುವಾರ ಸಂಚಾರ ನಿರ್ಬಂಧ
ಬೆಂಗಳೂರು,ಮೇ.31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂ.1 ಭಾನುವಾರ ಐಪಿಎಲ್ ಟಿ-20 ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.
ಕ್ರೀಡಾಂಗಣ ಪ್ರವೇಶ/ನಿರ್ಗಮನ
ಗೇಟ್ ಸಂಖ್ಯೆ 1ರಿಂದ ಗೇಟ್ ಸಂಖ್ಯೆ 9: ಕ್ವೀನ್ಸ್ ರಸ್ತೆಯಲ್ಲಿ ಪಾದಚಾರಿ ಹಾಗೂ ವೀಕ್ಷಕರಿಗೆ ಹೋಗಲು ಅವಕಾಶ ಕಲ್ಪಿಸಿದೆ.
ಗೇಟ್ ಸಂಖ್ಯೆ 17ರಿಂದ 21: ಲಿಂಕ್ ರಸ್ತೆ ಅನಿಲ್‌ಕುಂಬ್ಳೆ ವೃತ್ತದಿಂದ ಪಾದಚಾರಿ ಮಾರ್ಗದಲ್ಲಿ ಹೋಗಬಹುದು.[ಐಪಿಎಲ್ ಫೈನಲ್ ಬಿಎಂಟಿಸಿಯಿಂದ ಹೆಚ್ಚುವರಿ ಸೇವೆ]
ವಾಹನಗಳನ್ನು ಇಲ್ಲಿ ನಿಲ್ಲಿಸಬಹುದು
ಸಾರ್ವಜನಿಕರು: ಸೇಂಟ್ ಜೋಸೆಫ್ ಇಂಡಿಯನ್ ಪ್ರೌಢಶಾಲೆ ಮೈದಾನ ಮತ್ತು ಕಂಠೀರವ ಕ್ರೀಡಾಂಗಣ ಆವರಣದಲ್ಲಿ ಪಾರ್ಕ್ ಮಾಡಬಹುದು.
ಗಣ್ಯ ವ್ಯಕ್ತಿಗಳಿಗೆ: ಯು.ಬಿ ಸಿಟಿ ಪೇ ಅಂಡ್ ಪಾರ್ಕಿಂಗ್ ಸ್ಥಳದಲ್ಲಿ
ಕೆ.ಎಸ್.ಸಿ.ಎ ಸದಸ್ಯರಿಗೆ: ಸೇಂಟ್ ಮಾರ್ಕ್ಸ್ ಕ್ಯಾಥಡ್ರೆಲ್ ಚರ್ಚ್ ಆವರಣದಲ್ಲಿ ಹಾಗೂ ಶಿವಾಜಿನಗರ ಬಸ್ ನಿಲ್ದಾಣ 1ನೇ ಮಹಡಿಯಲ್ಲಿ ಪಾರ್ಕ್ ಮಾಡಬಹುದು.
ಕರ್ತವ್ಯ ನಿಯೋಜನೆ ಅಧಿಕಾರಿಗಳಿಗೆ: ಪೊಲೀಸ್ ಅಧಿಕಾರಿ/ಸಿಬ್ಬಂದಿ ಕಬ್ಬನ್‌ಪಾರ್ಕ್ ಒಳಭಾಗದ ಕೆಜಿಐಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಗ್ ಸ್ಥಳದಲ್ಲಿ ನಿಲುಗಡೆ ಮಾಡಬಹುದು.

ಕ್ವೀನ್ಸ್ ರಸ್ತೆ: ಸಿಟಿಒ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಎರಡು ಕಡೆ
ಎಂಜಿ ರಸ್ತೆ : ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ
ಲಿಂಕ್ ರಸ್ತೆ: ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆಯವರೆಗೆ
ರಾಜಭವನ ರಸ್ತೆ: ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
ಕ್ರೀಡಾಂಗಣ: ಕ್ರೀಡಾಂಗಣದ ಕಾಂಪೌಂಡಿಗೆ ಹೊಂದಿಕೊಂಡಂತೆ ರಸ್ತೆಯ ಎರಡೂ ಕಡೆ
ಕಬ್ಬನ್ ರಸ್ತೆ: ಬಿ.ಆರ್.ವಿ ವೃತ್ತದಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ. ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲಾ ಮಾದರಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಕಬ್ಬನ್ ಪಾರ್ಕ್: ಪಾರ್ಕಿನ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಫೌಂಟೇನ್ ರಸ್ತೆ
ಸೇಂಟ್ ಮಾರ್ಕ್ಸ್ ರಸ್ತೆ: ಎಸ್.ಬಿ.ಐ ವೃತ್ತದಿಂದ ಆಶೀರ್ವಾದ ವೃತ್ತದವರೆಗೆ
ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆಯವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ
ಕಸ್ತೂರಬಾ ರಸ್ತೆ:ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ
ವಿಠ್ಠಲ ಮಲ್ಯ ರಸ್ತೆ: ಸಿದ್ದಲಿಂಗಯ್ಯ ವೃತ್ತದಿಂದ ಬಿಷಪ್ ಕಾಟನ್ ಬಾಲಕಿಯರ ಶಾಲೆವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.











Click it and Unblock the Notifications