ಪಾನಮತ್ತರ ಲೈಸೆನ್ಸ್ ಕಿತ್ತ ಬೆಂಗಳೂರು ಪೊಲೀಸರು
ಬೆಂಗಳೂರು, ಮೇ 10 : ಮದ್ಯ ಸೇವಿಸಿ ವಾಹನ ಚಾಲಕ ಮೇಲೆ ಸಾರಿಗೆ ಇಲಾಖೆ ಮುಗಿಬಿದ್ದಿದ್ದು, ಬೆಂಗಳೂರಿನಲ್ಲಿ 374 ಪಾನಮತ್ತ ಚಾಲಕರು ಹಾಗೂ ಸಂಚಾರದ ಇತರ ನಿಯಮಗಳನ್ನು ಉಲ್ಲಂಘಿಸಿದ 2380 ಚಾಲಕರ ಚಾಲನಾ ಅನುಜ್ಞಾ ಪತ್ರಗಳನ್ನು ಅಮಾನತ್ತುಪಡಿಸಿದೆ.
ಬೆಂಗಳೂರು ಸಂಚಾರ ಪೊಲೀಸರು ಪಾನಮತ್ತ 831 ಚಾಲಕರು ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ 3466 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ಅವರ ಚಾಲನಾ ಅನುಜ್ಞಾಪತ್ರ ಅಮಾನತ್ತು ಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದರು. [ಈ ಪೊಲೀಸ್ ಅಂದ್ರೆ ಜನರಿಗೆ ಅಚ್ಚುಮೆಚ್ಚು]

ಬಾಕಿ ಉಳಿದಿರುವ 457 ಮದ್ಯಪಾನ ಮಾಡಿ ಚಾಲನೆ ಮಾಡಿದ ಪ್ರಕರಣಗಳು ಮತ್ತು 1086 ಇನ್ನಿತರೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಷಯದಲ್ಲಿ ಚಾಲಕರಿಗೆ ನೋಟೀಸ್ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಚಾಲನಾ ಅನುಜ್ಞಾಪತ್ರಗಳನ್ನು ಅಮಾನತ್ತು ಪಡಿಸಲಾಗುವುದು ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಸೇರಿದಂತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಸುರಕ್ಷತೆಗೆ ಧಕ್ಕೆಯಾಗುವ ರೀತಿಯಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಚಾಲನಾ ಅನುಜ್ಞಾಪತ್ರಗಳನ್ನು ಅಮಾನತ್ತುಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications