ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾನಮತ್ತರ ಲೈಸೆನ್ಸ್ ಕಿತ್ತ ಬೆಂಗಳೂರು ಪೊಲೀಸರು

By Prasad
|
Google Oneindia Kannada News

ಬೆಂಗಳೂರು, ಮೇ 10 : ಮದ್ಯ ಸೇವಿಸಿ ವಾಹನ ಚಾಲಕ ಮೇಲೆ ಸಾರಿಗೆ ಇಲಾಖೆ ಮುಗಿಬಿದ್ದಿದ್ದು, ಬೆಂಗಳೂರಿನಲ್ಲಿ 374 ಪಾನಮತ್ತ ಚಾಲಕರು ಹಾಗೂ ಸಂಚಾರದ ಇತರ ನಿಯಮಗಳನ್ನು ಉಲ್ಲಂಘಿಸಿದ 2380 ಚಾಲಕರ ಚಾಲನಾ ಅನುಜ್ಞಾ ಪತ್ರಗಳನ್ನು ಅಮಾನತ್ತುಪಡಿಸಿದೆ.

ಬೆಂಗಳೂರು ಸಂಚಾರ ಪೊಲೀಸರು ಪಾನಮತ್ತ 831 ಚಾಲಕರು ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ 3466 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ಅವರ ಚಾಲನಾ ಅನುಜ್ಞಾಪತ್ರ ಅಮಾನತ್ತು ಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದರು. [ಈ ಪೊಲೀಸ್ ಅಂದ್ರೆ ಜನರಿಗೆ ಅಚ್ಚುಮೆಚ್ಚು]

Traffic police cancel license of drunk drivers

ಬಾಕಿ ಉಳಿದಿರುವ 457 ಮದ್ಯಪಾನ ಮಾಡಿ ಚಾಲನೆ ಮಾಡಿದ ಪ್ರಕರಣಗಳು ಮತ್ತು 1086 ಇನ್ನಿತರೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಷಯದಲ್ಲಿ ಚಾಲಕರಿಗೆ ನೋಟೀಸ್‌ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಚಾಲನಾ ಅನುಜ್ಞಾಪತ್ರಗಳನ್ನು ಅಮಾನತ್ತು ಪಡಿಸಲಾಗುವುದು ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಸೇರಿದಂತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಸುರಕ್ಷತೆಗೆ ಧಕ್ಕೆಯಾಗುವ ರೀತಿಯಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಚಾಲನಾ ಅನುಜ್ಞಾಪತ್ರಗಳನ್ನು ಅಮಾನತ್ತುಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

English summary
Bangalore traffic police have been taking stringent action against drivers who drink and drive and also against those who have violated traffic rules. The police have warned drivers against such rule violations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X