ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

6 ತಿಂಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಗ್ರಹಿಸಿದ ದಂಡ ಎಷ್ಟು?

|
Google Oneindia Kannada News

ಬೆಂಗಳೂರು, ಜುಲೈ 08: ಕೊರೊನಾ ಲಾಕ್‌ಡೌನ್ ನಡುವೆಯೂ ಕಳೆದ 6 ತಿಂಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಬರೋಬ್ಬರಿ 58 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ ಉಲ್ಲಂಘನೆ, ಕರ್ನಾಟಕ ಪೊಲೀಸ್ ಕಾಯ್ದೆ, ಕರ್ನಾಟಕ ಟ್ರಾಫಿಕ್ ಕಾಯ್ದೆ, ಟೋಯಿಂಗ್ ದಂಡ ಸೇರಿ ಹಲವು ವಿಧಗಳಿಂದ ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ರೆ ಪೇಟಿಎಂ ಮೂಲಕ ದಂಡ ಪಾವತಿಸಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ರೆ ಪೇಟಿಎಂ ಮೂಲಕ ದಂಡ ಪಾವತಿಸಿ

ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾಗಿದ್ದ ಪರಿಣಾಮ, ಮೇ 10ರಿಂದ ಜೂನ್ 14ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿತ್ತು.
ಮೇ 31ರವರೆಗೆ ಬೆಂಗಳೂರು ಸಂಚಾರ ಪೊಲೀಸರು ಒಟ್ಟು 58.9 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

Bengaluru Traffic Police Collect Rs 58 cr In Fines In First 6 Months of 2021

2017 ರಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು 112.3 ಕೋಟಿ ರೂ ದಂಡ ಸಂಗ್ರಹಿಸಿದ್ದರು, ಆದರೆ ಇದೀಗ ಕೊರೊನಾ ಲಾಕ್‌ಡೌನ್ ಮಧ್ಯೆಯೂ ಆರೇ ತಿಂಗಳಲ್ಲಿ 58 ಕೋಟಿ ರೂ. ದಂಡ ವಸೂಲಿ ಮಾಡಿ ದಾಖಲೆ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್ ಸಡಿಲಿಕೆ ಮಾಡಿದ್ದ ಪರಿಣಾಮ ಬೆಂಗಳೂರು ಸೇರಿದಂತೆ 12ನಗರಗಳಲ್ಲಿ ನೈಟ್ರೋಜನ್ ಡೈಆಕ್ಸೈಡ್(NO2) ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ವಾಹನಗಳ ಸಂಚಾರ ಪ್ರಮಾಣ ಕಡಿಮೆಯಾಗಿತ್ತು, ಇದೀಗ ಏಕಾಏಕಿ ಉದ್ದಿಮೆ, ಕಾರ್ಖಾನೆಗಳು ಆರಂಭ, ವಾಹನ ಸಂಚಾರ ಹೆಚ್ಚಾದ ಪರಿಣಾಮ ಪರಿಸರ ಮಾಲಿನ್ಯ ಹೆಚ್ಚುತ್ತಿದೆ.

ಈ ಕುರಿತು ಗ್ರೀನ್ ಪೀಸ್ ಇಂಡಿಯಾ ಸಮೀಕ್ಷೆಯೊಂದನ್ನು ನಡೆಸಿ ವರದಿ ಸಿದ್ಧಪಡಿಸಿದೆ, ಅದರಲ್ಲಿ ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ 12 ನಗರಗಳ ವಾತಾವರಣಗಳಲ್ಲಿ ನೈಟ್ರೋಜನ್ ಡೈಆಕ್ಸೈಡ್ ಪ್ರಮಾಣದಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ ಎಂಬುದು ತಿಳಿದುಬಂದಿದೆ.

Recommended Video

Zodiac Sign ರಾಶಿ ನಕ್ಷತ್ರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ!! | Oneindia Kannada

English summary
The bustling roads of Bengaluru witnessed a significant dip in traffic and vehicular movement due to the lockdowns resulting from the COVID-19 pandemic. But despite a complete lockdown from May 10 to June 14, 2021,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X