ಹೆಲ್ಮೆಟ್ ಹಾಕದ ಕಾರು ಮಾಲೀಕರಿಗೆ ನೋಟಿಸ್!
ಬೆಂಗಳೂರು, ಫೆಬ್ರವರಿ 29 : ಬೆಂಗಳೂರು ನಗರದಲ್ಲಿ ಬೈಕ್ ಸವಾರರು ಮತ್ತು ಹಿಂಬಂದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ. ಆದರೆ, ಕಾರಿನ ಮಾಲೀಕರು ಹೆಲ್ಮೆಟ್ ಧರಿಸದೇ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಹೈಗ್ರೌಂಡ್ಸ್ ಸಂಚಾರ ಠಾಣೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಅಚ್ಚರಿಯಾದರೂ ಇದು ಸತ್ಯ. ಬಿಜೆಪಿ ರಾಜ್ಯ ಘಟಕದ ಮಾಧ್ಯಮ ವಿಭಾಗದ ಮುಖ್ಯಸ್ಥ ಎಸ್.ಪ್ರಕಾಶ್ ಅವರಿಗೆ ಭಾನುವಾರ ಸಂಚಾರಿ ಪೊಲೀಸರ ನೋಟಿಸ್ ತಲುಪಿದ್ದು, 100 ರೂ. ದಂಡ ಕಟ್ಟಿ ಎಂದು ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ. [ಇಡೀ ಕರ್ನಾಟಕಕ್ಕೆ ಇನ್ಮುಂದೆ ಶಿರಸ್ತ್ರಾಣ ಕಡ್ಡಾಯ]

ಫೆ.4ರಂದು ಬಸವೇಶ್ವರ ವೃತ್ತದಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಬೈಕ್ನ ಹಿಂಬಂದಿ ಸವಾರ ಹೆಲ್ಮೆಟ್ ಧರಿಸದೆ ನಿಯಮ ಉಲ್ಲಂಘಿಸಿದ್ದಾರೆ ಎಂದು ಪ್ರಕಾಶ್ ಅವರ ಕೆಎ 04 ಎಂಪಿ 7257 ಕಾರಿನ ನೋಂದಣಿ ಸಂಖ್ಯೆಗೆ ನೋಟಿಸ್ ಕಳುಹಿಸಲಾಗಿದೆ. [ಹೆಲ್ಮೆಟ್ ಕಡ್ಡಾಯ; ಸಿ.ಎಂ ಮನೆ ಮುಂದೆ ಯುವಕ-ಯುವತಿ ಮಾಡಿದ್ದೇನು?]
I am imposed fined for not wearing helmet while I was in my car. Is helmet mandatory for car too? @BlrCityPolice pic.twitter.com/HZrxCc5j79
— Prakash.s. (@sprakaashbjp) February 28, 2016
ನೋಟಿಸ್ ನೋಡಿ ಆಕ್ರೋಶಗೊಂಡಿರುವ ಪ್ರಕಾಶ್, 'ಇದಕ್ಕೆ ಸಂಚಾರಿ ಪೊಲೀಸರ ನಿರ್ಲಕ್ಷ್ಯ ಕಾರಣ. ಈ ರೀತಿಯ ಯಡವಟ್ಟಿನಿಂದಾಗಿ ಸಾರ್ವಜನಿಕರು ಗೊಂದಲಕ್ಕೆ ಒಳಗಾಗುತ್ತಾರೆ' ಎಂದು ಟ್ವಿಟ್ ಮಾಡಿದ್ದಾರೆ. [ಹೆಲ್ಮೆಟ್ ಕಡ್ಡಾಯ, ಸಿದ್ದರಾಮಯ್ಯ ಸ್ಪಷ್ಟನೆಗಳು]
@shaksingh @BlrCityPolice no joke reality. This is my car pic.twitter.com/BdlqVNEtGt
— Prakash.s. (@sprakaashbjp) February 28, 2016
ಕೆಲವು ತಾಂತ್ರಿಕ ತೊಂದರೆಯಿಂದಾಗಿ ಈ ರೀತಿ ಆಗಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರಿ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications