ಪ್ರಯಾಣಿಕರೇ ಗಮನಿಸಿ! ಬೆಂಗಳೂರು-ಮಂಗಳೂರು ನಡುವೆ ಸಂಚಾರ ಬಂದ್: ಕಾರಣವೇನು?
ಬೆಂಗಳೂರು, ಮೇ, 13: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಕಳೆದ ರಾತ್ರಿ (ಮೇ 12)ಯಿಂದ ಬಿರುಗಾಳಿ ಸಹಿತ ಸುರಿದ ಅಬ್ಬರದ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಬೃಹತ್ ಮರವೊಂದು ಉರುಳಿಬಿದ್ದಿದೆ. ಹಾಗಾದರೆ ಇದರಿಂದ ಏನೆಲ್ಲ ಸಮಸ್ಯೆಗಳು ಸಂಭವಿಸಿದ್ವು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದ ಹಿನ್ನೆಲೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ.

ತಿಂಗಳುಗಳ ಬಳಿಕ ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಿದೆ. ಪರಿಣಾಮ ಮರ ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸಚಾರ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ ಮರಗಳ ತೆರವಿಗೆ ಮುಂದಾಗಿದ್ದಾರೆ. ಮತ್ತೊಂದೆಡೆ ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಹೆದ್ದಾರಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನವೊಂದು ಕೆಟ್ಟು ನಿಂತು ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದ ಘಟನೆ ಚಾಮರಾಜನಗರ ಜಿಲ್ಲೆ ಬಂಡೀಪುರದ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಬಳಿಯ ಬಂಡಿಪುರದ ಪ್ರವೇಶ ದ್ವಾರದ ಮುಂದೆ ಭಾರಿ ಗಾತ್ರದ ಕಂಟೈನರ್ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿ ಕಿಲೋ ಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆಯಿಂದ ಹಿಂದೆ ಮುಂದೆ ಹೋಗಲಾರದೆ ಪ್ರಯಾಣಿಕ ಪರದಾಡಿದ ಘಟನೆ ನಡೆದಿದೆ.
ಈ ಟ್ರಾಫಿಕ್‌ನಿಂದ ಭಾನುವಾರದ ವಿಶೇಷ ಊಟಿ, ಬಂಡೀಪುರ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಹೋಗುವ ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಇನ್ನು ಹೀಗೆ ಸುಮಾರು ಒಂದು ಗಂಟೆಗಳ ಕಾಲ ಹಿಂದೆ ಮುಂದೆ ಹೋಗಲಾರದೆ ಮಾರ್ಗದ ಮಧ್ಯೆ ಸಿಲುಕಿ ಪ್ರಯಾಣಿಕರು ಪರದಾಡಿದ್ದಾರೆ.











Click it and Unblock the Notifications