ಸಂಚಾರಿ ನಿಯಮ ಪಾಲಿಸದಿದ್ರೆ ಕೋರ್ಟ್‌ಗೆ ಹೋಗಿ ದಂಡ ಕಟ್ಟಿ

ಬೆಂಗಳೂರು, ಅಕ್ಟೋಬರ್ 30 : ಬೆಂಗಳೂರು ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದವರು ಇನ್ನುಮುಂದೆ ಕೋರ್ಟ್‌ಗೆ ಹೋಗಿ ದಂಡ ಪಾವತಿ ಮಾಡಬೇಕಾಗುತ್ತದೆ. ಸಂಚಾರಿ ಪೊಲೀಸರು ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಈ ನಿಯಮವನ್ನು ಜಾರಿಗೆ ತಂದಿದ್ದಾರೆ.

ಹೆಲ್ಮೆಟ್ ಇಲ್ಲದೇ ಪ್ರಯಾಣ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮುಂತಾದ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. [ಕಬ್ಬನ್ ಪಾರ್ಕ್ ನಲ್ಲಿ ಶನಿವಾರವೂ ಸಂಚಾರ ಬಂದ್]

bangalore police

ನ್ಯಾಯಾಲಯಕ್ಕೆ ಹೋಗಿ ವಾಹನ ಸವಾರರು ದಂಡವನ್ನು ಪಾವತಿ ಮಾಡಿ, ನಂತರ ಪೊಲೀಸ್ ಠಾಣೆಗೆ ತೆರಳಿ ವಾಹನ ಮತ್ತು ಅದರ ದಾಖಲಾತಿಗಳನ್ನು ಪಡೆಯಬೇಕಾಗುತ್ತದೆ. ಈ ನಿಯಮವನ್ನು ಅಕ್ಟೋಬರ್ 29ರಿಂದಲೇ ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಜಾರಿಗೆ ತರಲಾಗಿದೆ. [ಟೆಂಡರ್ ಶ್ಯೂರ್ ರಸ್ತೆಯ ವಿಶೇಷತೆಗಳೇನು?]

ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮೂವರು ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ನಿಯೋಜನೆ ಮಾಡಲಾಗಿದೆ. ನಗರದ ಮೂರು ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಮಾತ್ರ ಈ ನಿಯಮ ಜಾರಿಯಲ್ಲಿರುತ್ತದೆ.

ಯಾವ-ಯಾವ ರಸ್ತೆಗಳು : ಈ ವಿಶೇಷ ಕಾರ್ಯಾಚರಣೆ ವಿಠಲ್‌ ಮಲ್ಯ, ಸೇಂಟ್‌ ಮಾರ್ಕ್ಸ್‌ ಹಾಗೂ ಕನ್ನಿಂಗ್‌ಹ್ಯಾಂ ರಸ್ತೆಗಳಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+