ಶೀಘ್ರ ಬಿ ಖಾತಾ ಸ್ವತ್ತುಗಳಿಗೆ ಎ ಖಾತಾ ನೀಡಲು ಬಿಬಿಎಂಪಿ ಕ್ರಮ
ಬೆಂಗಳೂರು, ಫೆಬ್ರವರಿ 23: ಬಿ ಖಾತಾ ಸ್ವತ್ತುಗಳಿಗೆ ಎ ಖಾತಾ ನೀಡಲು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಕಂದಾಯ ನಿವೇಶನಗಳಿಗೆ ಎ ಖಾತಾ ನೀಡುವ ಪ್ರಕ್ರಿಯೆ ಆಗಬೇಕೆಂಬ ಪಾಲಿಕೆಯ ಪ್ರತಿಯೊಬ್ಬ ಸದಸ್ಯರಿಂದಲೂ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹಿಂದಿನ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸವಿಸ್ತಾರವಾದ ಪ್ರಸ್ತಾವನೆ ಕಳುಹಿಸಿಕೊಡಲಾಗಿತ್ತು.

ಬಿಬಿಎಂಪಿಯ ಈ ಪ್ರಸ್ತಾವನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕಂದಾಯ ನಿವೇಶನಗಳಿಗೆ ಎ ಖಾತಾ ನೀಡಲು ಸವಿಸ್ತಾರವಾದ ನಿಯಮ ಮತ್ತು ಮಾರ್ಗಸೂಚಿಗಳನ್ನು ರೂಪಿಸುವಂತೆ ಸೂಚಿಸಿತ್ತು. ಅದರಂತೆ ಅಗತ್ಯ ನಿಯಮ ಮತ್ತು ಮಾರ್ಗ ಸೂಚಿಗಳನ್ನು ರೂಪಿಸಿ ಅಂತಿಮಗೊಳಿಸಲಾಗಿದ್ದು, ಇನ್ನೊಂದು ವಾರದಲ್ಲಿ ಇದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಕಂದಾಯ ನಿವೇಶನಗಳಿಗೆ ಎ ಖಾತಾ ನೀಡುವಸಂಬಂಧ ಸರ್ಕಾರಕ್ಕೆ ಕಳುಹಿಸಿದ್ದ ಪ್ರಸ್ತಾವನೆ ನಗರಾಭಿವೃದ್ಧಿ ಇಲಾಖೆಯಿಂದ ಕಾನೂನು ಇಲಾಖೆಗೆ ವರ್ಗಾವಣೆಗೊಂಡಾಗ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯುವಂತೆ ಸೂಚಿನೆ ಬಂದಿತ್ತು. ಬಳಿಕ ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತುಕತೆ ನಡೆದಿತ್ತು.












Click it and Unblock the Notifications