ಕುತೂಹಲ ಘಟ್ಟ ತಲುಪಿದ ತೊಗಾಡಿಯಾ ಭಾಷಣ ವಿವಾದ
ಬೆಂಗಳೂರು, ಫೆ.8: ಹಿಂದೂ ಸಮಾಜೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೇಸರಿ ಮಯವಾಗಿರುವ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪ್ರವೀಣ್ ತೊಗಾಡಿಯಾ ಭಾಷಣ ವಿಡಿಯೋ ಪ್ರಸಾರ ಕಾಣಲು ಕಾದಿದ್ದ ಜನಕ್ಕೆ ನಿರಾಶೆಯಾಗಲಿದೆ.
ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ವಿಡಿಯೋ ಮೂಲಕ ಭಾಷಣ ಮಾಡಲು ಅನುಮತಿ ನೀಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. [ತೊಗಾಡಿಯಾ ಬೆಂಗಳೂರಿಗೆ ಬರುವಂತಿಲ್ಲ : ಹೈಕೋರ್ಟ್]
ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಎಚ್‌ಪಿಯು ಅವರ ವಿಡಿಯೋ ಭಾಷಣವನ್ನು ಸಮಾಜೋತ್ಸವ ಸಂದರ್ಭದಲ್ಲಿ ಬಿತ್ತರಿಸಲು ಸಿದ್ಧತೆ ನಡೆಸಿತ್ತು.
ಆದರೆ, ಪ್ರವೀಣ್ ಅವರ ಭಾಷಣದ ದೃಶ್ಯ ಅಥವಾ ಧ್ವನಿ ಮುದ್ರಿತ ನೇರ ಪ್ರಸಾರಕ್ಕೆ ಅನುಮತಿ ನೀಡಿಲ್ಲ. ಪ್ರವೀಣ್ ಅವರಿಗೆ ವಿಧಿಸಿರುವ ನಿರ್ಬಂಧದಲ್ಲಿ ಇದೂ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಏನಿದೆ ಆದೇಶದಲ್ಲಿ?: ಸಮಾಜೋತ್ಸವಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ನಗರ ಪೊಲೀಸ್ ಆಯುಕ್ತರು ಸಿಆರ್‌ಪಿಸಿ ಕಲಂ 144 (3) ಅಡಿ ಈ ನಾಲ್ಕು ಪುಟಗಳ ಪರಿಷ್ಕೃತ ಆದೇಶ ಮಾಡಿದ್ದಾರೆ. ಅದರಂತೆ, ಏಳು ದಿನಗಳು ಅಂದರೆ ಫೆ.5ರಿಂದ 11ರವರೆಗೆ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ತೊಗಾಡಿಯಾ ಪ್ರವೇಶಿಸುವಂತಿಲ್ಲ. [ತೊಗಾಡಿಯಾಗೆ ನಿಷೇಧ ಯಾರು, ಏನು ಹೇಳಿದರು?]
ಶನಿವಾರದಂದು ತೊಗಾಡಿಯಾ ಅವರು ಬೆಂಗಳೂರು ಗಡಿ ಭಾಗದಲ್ಲಿರುವ ಹೊಸೂರಿಗೆ ಆಗಮಿಸಿ ಭಾಷಣ ಮಾಡಿದ್ದಾರೆ. ಸದ್ಯಕ್ಕೆ ಎಲ್ಲಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆ.8ರ ಭಾನುವಾರ ಸಂಜೆ 4 ಗಂಟೆಗೆ 'ವಿರಾಟ ಹಿಂದೂ ಸಮಾಜೋತ್ಸವ' ನಡೆಯಲಿದೆ. ನ್ಯಾಷನಲ್ ಕಾಲೇಜು ಮೈದಾನ ರಸ್ತೆ ಸೇರಿದಂತೆ ಸುತ್ತ ಮುತ್ತ ಪ್ರದೇಶವೆಲ್ಲ ಕೇಸರಿ ಧ್ವಜಗಳಿಂದ ತುಂಬಿ ಹೋಗಿವೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications