ಕುತೂಹಲ ಕೆರಳಿಸಿದ ಸಾರಿಗೆ ಮುಷ್ಕರ: ಹಲವು ಸಂಘಟನೆಗಳ ಬೆಂಬಲವಿಲ್ಲ

Recommended Video

      ಇಂದಿನ ಸಾರಿಗೆ ಮುಷ್ಕರಕ್ಕೆ ಯಾವ ಸಂಘಟನೆ ಬೆಂಬಲ ಕೂಡ ಇಲ್ಲ | Oneindia Kannada

      ಬೆಂಗಳೂರು, ಆಗಸ್ಟ್ 6: ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಆಗಸ್ಟ್ 7ರಿಂದ ದೇಶಾದ್ಯಂತ ಸಾರಿಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಬಸ್‌ಗಳ ಓಡಾಟ ಎಂದಿನಂತಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      20 ಅಂಶಗಳನ್ನೊಳಗೊಂಡ ಮೋಟಾರು ಸಾರಿಗೆ ಕಾಯ್ದೆ-2017ನ್ನು ಈಗಾಗಲೇ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದು, ಲೋಕಸಭೆಯ ಅಂಗೀಕಾರವಾಗಬೇಕಿದೆ. ಇದು ಖಾಸಗಿ ಕಂಪನಿಗಳ ಹುನ್ನಾರವಾಗಿದ್ದು, ಈ ಕಾಯ್ದೆಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

      ರಾಜ್ಯ ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ವಿಭಾಗ ಸೇರಿದಂತೆ ಸಾರಿಗೆ ಸಂಘಟನೆಗಳು ಮುಷ್ಕರ ನಡೆಸಲು ಮುಂದಾಗಿತ್ತು ಆದರೆ ಇದೀಗ ದೊರೆತ ಮಾಹಿತಿ ಪ್ರಕಾರ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆಎಸ್‌ಆರ್‌ಟಿಸಿ ನಿಗಮ ತನ್ನ ನೌಕರರಿಗೆ ತಿಳಿಸಿದೆ.

      Transport employees federation strike: KSRTC, BMTC employees back foot

      ಓಲಾ, ಊಬರ್ ಸೇರಿದಂತೆ ಇನ್ನಿತರೆ ಸಂಘಟನೆಗಳು ಮಾತ್ರ ಬೆಂಬಲ ನೀಡಿದೆ. ಸಾರಿಗೆ ಬಸ್‌ಗಳು ಎಂದಿನಂತೆ ಸಂಚರಿಸಲಿದೆ. ರಸ್ತೆ ಸಾರಿಗೆಯಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆಯು ಈ ಪ್ರತಿಭಟನೆಗೆ ಕರೆ ನೀಡಿದ್ದು,ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಸಂಪೂರ್ಣ ಬಂದ್ ನಡೆಸಲು ತೀರ್ಮಾನಿಸಲಾಗಿದೆ.

      ನಗರದ ಟೌನ್ ಹಾಲ್​ನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯುನ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.

      ಈ ಕಾಯ್ದೆಯ ಅನ್ವಯ ವಾಹನದ ನೋಂದಣಿಯಿಂದ ಹಿಡಿದು ಪ್ರತಿಯೊಂದಕ್ಕೂ ಏಜೆನ್ಸಿಯವರನ್ನೇ ಅವಲಂಬಿಸಬೇಕಾಗುತ್ತೆ. ರಾಜ್ಯಗಳ ಅಧಿಕಾರ ಮೊಟಕುಗೊಳ್ಳಲಿದೆ. ಅಂದರೆ ವಾಹನಗಳ ಪರ್ಮಿಟ್ ನೀಡುವಿಕೆ, ರಾಜ್ಯಗಳ ಸಾರಿಗೆ ನೀತಿ ನಿರೂಪಣೆ, ತೆರಿಗೆ ಸಂಗ್ರಹ ಮುಂತಾದ ವಿಷಯಗಳಲ್ಲಿ ರಾಜ್ಯಗಳ ಅಧಿಕಾರವೇ ಇರುವುದಿಲ್ಲ.

      Transport employees federation strike: KSRTC, BMTC employees back foot

      ಈಗ ರಾಜ್ಯಗಳ ಕೈಯಲ್ಲಿರುವ ಅಂತಾರಾಜ್ಯ ಪರ್ಮಿಟ್ ನೀಡುವ ಅಧಿಕಾರ ಪೂರ್ಣವಾಗಿ ಕೇಂದ್ರ ಸರ್ಕಾರದ ಪಾಲಾಗಲಿದೆ. ಸ್ಟೇಜ್ ಪರ್ಮಿಟ್ ಮತ್ತು ಕಾಂಟ್ರಾಕ್ಟ್ ಪರ್ಮಿಟ್ ಗಳ ಬದಲಿಗೆ ಒಂದೇ ಪರ್ಮಿಟ್ ಬರಲಿದ್ದು, ಲಾಸ್ಟ್ ಮೈಲ್ ಕನೆಕ್ಟಿವಿಟಿ ಹೆಸರಲ್ಲಿ ಖಾಸಗಿ ವಾಹನಗಳಿಗೆ ಪರ್ಮಿಟ್ ಇಲ್ಲದೆ ಓಡಿಸುವ ಅವಕಾಶ ಸಿಗಲಿದೆ.

      ಈ ಮಸೂದೆಯಿಂದಾಗಿ, ಬಿಡಿ ಭಾಗಗಳ ವ್ಯಾಪಾರಿಗಳು, ರಸ್ತೆ ಬದಿಯ ಸಣ್ಣ ಪುಟ್ಟ ವರ್ಕ್ ಶಾಪ್​ಗಳು, ರಿಪೇರಿ ಕೆಲಸಗಾರರು ಕೆಲಸಗಳನ್ನು ಕಳೆದುಕೊಳ್ಳುವ ಆತಂಕ ಇದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡಿದ್ರೆ ರೂ.5 ಸಾವಿರ ದಂಡ ಕಟ್ಟಬೇಕಿದೆ.

      ಈ ಹಿಂದೆ ಇದ್ದ ದಂಡದ ಮೊತ್ತವನ್ನು 1 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲಾಗಿದ್ದು, ಇನ್ನು ಲೈಸೆನ್ಸ್ ಇಲ್ಲದೇ ವಾಹನ ಚಾಲನೆ ಮಾಡುವುದು ಅಷ್ಟು ಸುಲಭವಲ್ಲ.ಇನ್ಮುಂದೆ ಸಿಗ್ನಲ್ ಜಂಪ್ ಮಾಡುವ ಮತ್ತೊಮ್ಮೆ ಯೋಚನೆ ಮಾಡಿ. ಯಾಕೇಂದ್ರೆ ಈ ಹಿಂದೆ ಇದ್ದ ರೂ.200 ದಂಡವನ್ನು 1 ಸಾವಿರಕ್ಕೆ ಹೆಚ್ಚಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+