ಸಿಲಿಕಾನ್ ಸಿಟಿಗೆ ಲಗ್ಗೆಯಿಟ್ಟ ಎಲೆಕ್ಟ್ರಿಕ್ ಬಸ್ನ ವಿಶೇಷತೆಗಳೇನು?
ಬೆಂಗಳೂರು, ಸೆಪ್ಟೆಂಬರ್ 25: ಸಿಲಿಕಾನ್ ಸಿಟಿಯಲ್ಲಿ ಬಹುನಿರೀಕ್ಷಿತ ಪರಿಸರ ಸ್ನೇಹಿ ವಿದ್ಯುನ್ಮಾನ ಬಸ್ ಸಂಚಾರ ಶುರುವಾಗಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ಬಿ ಶ್ರೀರಾಮುಲು ಗುರುವಾರ ಚಾಲನೆ ನೀಡಿದ್ದಾರೆ.
ಗುರುವಾರ ಕೆಂಗೇರಿ ಬಸ್ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ ನೀಡಿದ ಸಾರಿಗೆ ಸಚಿವ ಬಿ ಶ್ರೀರಾಮುಲು, ಅದೇ ಬಸ್ನಲ್ಲಿ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದರು. ಯಶವಂತಪುರದ 8ನೇ ಡಿಪೋ ಹಾಗೂ ಕೆ ಆರ್ ಪುರಂನ 29ನೇ ಡಿಪೋ ಹಾಗೂ ಕೆಂಗೇರಿಯ 37ನೇ ಡಿಪೋಗಳಿಂದ ಒಟ್ಟು 90 ಎಲೆಕ್ಟ್ರಿಕ್ ಬಸ್‌ಗಳನ್ನು ನಿರ್ವಹಣೆ ಮಾಡಲಾಗುತ್ತದೆ. ಒಂದು ಬಸ್ ಒಂದು ಬಾರಿ ಚಾರ್ಜ್ ಮಾಡಿದ ನಂತರ 120 ಕಿಲೋ ಮೀಟರ್ ದೂರ ಚಲಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಒಂದು ಬಸ್‌ಗೆ 45 ನಿಮಿಷಗಳ ಚಾರ್ಜಿಂಗ್ ಅವಕಾಶವನ್ನು ನೀಡಲಾಗುತ್ತದೆ. ನಿಂದ ಪೂರೈಸಲಾಗುತ್ತದೆ.

ಎಲೆಕ್ಟ್ರಿಕ್ ಬಸ್ ಟೆಂಡರ್ ಆಹ್ವಾನಿಸಿದ್ದು ಯಾವಾಗ?:
ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಮೆಟ್ರೋ ಫೀಡರ್ ಸೇವೆಗಾಗಿ 9Mtr ಹವಾನಿಯಂತ್ರಣ ರಹಿತ 90 ಎಲೆಕ್ಟ್ರಿಕ್ ಬಸ್‌ಗಳನ್ನು "ಒಟ್ಟು ವೆಚ್ಚದ ಒಪ್ಪಂದ" (GCC) ಆಧಾರದಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಸೇವಾ ಪೂರೈಕೆದಾರರ ಆಯ್ಕೆಯನ್ನು "ಟೆಂಡರ್ ಸಂಖ್ಯೆ T-122 ದಿನಾಂಕ 03.02.2020 ರಂದು ಆಹ್ವಾನಿಸಲಾಗಿತ್ತು. ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ 90 ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಗಾಗಿ ರೂ.50 ಕೋಟಿಗಳಷ್ಟು ಹಣಕಾಸಿನ ನೆರವು ನೀಡುತ್ತದೆ. ಪ್ರತಿ ಬಸ್‌ಗೆ ರೂ.50 ಲಕ್ಷಗಳ ಪ್ರೋತ್ಸಾಹಧನ (90 ಬಸ್‌ಗಳಿಗೆ ರೂ.45 ಕೋಟಿ) ಬಿಡ್ಡರ್‌ಗೆ ಒದಗಿಸಲಾಗುವುದು ಮತ್ತು ರೂ.5 ಕೋಟಿಯನ್ನು ಚಾರ್ಜಿಂಗ್ ಮೂಲಸೌಕರ್ಯ ಸ್ಥಾಪನೆಗೆ ಬಿಎಂಟಿಸಿ ಬಳಸಲಾಗುವುದು.
ಈ ಟೆಂಡರ್ ಅನ್ನು ಅಂತಿಮಗೊಳಿಸಲಾಗಿದ್ದು, GCC ದರದಲ್ಲಿ ರೂ.51.67/km ವಿದ್ಯುತ್ ಯೊಂದಿಗೆ 180 ಆಶ್ವಾಸಿತ ಕಿಲೋಮೀಟರ್‌ಗಳಿಗೆ 10 ವರ್ಷಗಳ ಅವಧಿಗೆ M/s. NTPC ವ್ಯಾಪರ್ ವಿದ್ಯುತ್ ನಿಗಮಕ್ಕೆ ನೀಡಲಾಗಿದೆ. ಈ ಬಸ್ಸುಗಳು 33+D ಆಸನ ಸಾಮರ್ಥ್ಯ ಹೊಂದಿದ್ದು, M/s.JBM (ಒಕ್ಕೂಟ ಪಾಲುದಾರ) ನಿಂದ ಪೂರೈಸಲಾಗುತ್ತದೆ.

ಎಲೆಕ್ಟ್ರಿಕ್ ಬಸ್ ಸಂಚರಿಸುವ ಮಾರ್ಗಗಳು ಯಾವುದು?
ಮೈಸೂರು ರಸ್ತೆ, ಬೈಯಪ್ಪನಹಳ್ಳಿ, ಬನಶಂಕರಿ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳಿಗೆ ಈ ಬಸ್ ಸಂಚರಿಸಲಿವೆ. ಬೆಂಗಳೂರಿನ ಮೊದಲ ವಿದ್ಯುನ್ಮಾನ ಬಸ್ ಅನ್ನು ಕೆಂಗೇರಿ ಮೆಟ್ರೊ ನಿಲ್ದಾಣದ ಪೂರಕ ಸೇವೆಗೆ ನಿಯೋಜನೆ ಮಾಡಲಾಗುತ್ತದೆ.

ಎಲೆಕ್ಟ್ರಿಕ್ ಬಸ್ನಲ್ಲಿ ಎಷ್ಟು ಸೀಟ್ ಇವೆ?
ಮೆಟ್ರೋ ನಿಲ್ದಾಣಗಳಿಗೆ ಪೂರಕ ಸೇವೆ ಒದಗಿಸಲು ನಿಯೋಜಿಸಲಾದ ಎಲೆಕ್ಟ್ರಿಕ್ ಬಸ್ನಲ್ಲಿ 32 ರಿಂದ 35 ಸೀಟುಗಳು ಇವೆ. ಮೆಟ್ರೊ ಪ್ರಯಾಣಿಕರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈ ಎಲೆಕ್ಟ್ರಿಕ್ ಬಸ್‌ಗಳನ್ನು ಪ್ರಾರಂಭಿಕ ಹಂತದಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಡಿಸೆಂಬರ್ ಹೊತ್ತಿಗೆ ನಗರಕ್ಕೆ ಬಾಕಿ ಉಳಿದ 89 ಎಲೆಕ್ಟ್ರಿಕ್ ಬಸ್ಗಳು ಆಗಮಿಸಲಿವೆ ಎಂದು ತಿಳಿದು ಬಂದಿದೆ.
Recommended Video

ಎಲೆಕ್ಟ್ರಿಕ್ ಬಸ್ಗಳಿಂದ ವಾಯುಮಾಲಿನ್ಯ ನಿಯಂತ್ರಣ
ಸಿಲಿಕಾನ್ ಸಿಟಿಯಲ್ಲಿ ವಾಹನ ದಟ್ಟಣೆ ಎಷ್ಟರ ಮಟ್ಟಿಗಿದೆಯೋ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಾಯುಮಾಲಿನ್ಯ ಸಮಸ್ಯೆ ಜನರನ್ನು ಕಾಡುತ್ತಿದೆ. ನಗರ ಬೀದಿಗಳಿಗೆ ಕಾಲಿಟ್ಟರೆ ಸಾಕು ಎಲ್ಲೆಲ್ಲೂ ವಾಹನಗಳ ಹೊಗೆ ಕಣ್ಣಿಗೆ ರಾಚುತ್ತದೆ. ಬೆಂಗಳೂರಿನಂತಹ ಬೃಹತ್ ನಗರದಲ್ಲಿ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ಗಳು ಬಹುಮುಖ್ಯ ಪಾತ್ರ ವಹಿಸಲಿವೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications