ಇಂದಿರಾ ಕ್ಯಾಂಟೀನ್ ಆಯ್ತು, ಇದೀಗ ಇಂದಿರಾ ಕ್ಲಿನಿಕ್ ಉದ್ಘಾಟನೆ
ಬೆಂಗಳೂರು, ಡಿಸೆಂಬರ್ 02: ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ಸಿನ ಬೆನ್ನಲ್ಲೆ ಇದೀಗ ರಾಜ್ಯ ಸರ್ಕಾರವು ಸಾರಿಗೆ ಇಲಾಖೆಯ ಅಡಿಯಲ್ಲಿ ಇಂದಿರಾ ಹೆಸರಿನಲ್ಲಿ ಇನ್ನೊಂದು ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತುಕೊಂಡಿದೆ.
ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಇಂದಿರಾ ಕ್ಲಿನಿಕ್ ಯೋಜನೆಯನ್ನು ಜಾರಿಗೆ ತಂದಿದೆ. ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಯಶವಂತಪುರ ಟಿಟಿಎಂಸಿಯಲ್ಲಿ ಇಂದು (ಶನಿವಾರ) ಆರಂಭಿಕವಾಗಿ ಎರಡು ಇಂದಿರಾ ಕ್ಲಿನಿಕ್ ಗಳನ್ನು ಸಾರಿಗೆ ಸಚಿವ ಎಚ್ ಎಂ ರೇವಣ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವ ರೇವಣ್ಣ, "ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್ ನಿರ್ಮಿಸಲಾಗಿದೆ. ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಪಿಂಕ್ ಆಸನ ಅಳವಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮತ್ತು ಮಹಿಳೆಯರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ಆಯ್ದ ಪ್ರದೇಶಗಳಿಗೆ ರಿಯಾಯಿತಿ ಟಿಕೆಟ್ ದರದಲ್ಲಿ ಹೊಸತಾಗಿ 'ಇಂದಿರಾ ಸಾರಿಗೆ ಬಸ್' ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರೇವಣ್ಣ ತಿಳಿಸಿದರು.












Click it and Unblock the Notifications