ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

|
Google Oneindia Kannada News

ಬೆಂಗಳೂರು, ಮಾರ್ಚ್ 30: ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಿಹಿ ಸುದ್ದಿ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ವೇತನ ಪರಿಷ್ಕರಣೆ ಕುರಿತು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

4 ಸಾರಿಗೆ ನಿಗಮಗಳು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆ ನಡೆಸಿ ವೇತನ ಪರಿಷ್ಕರಣೆ ಸ್ವರೂಪದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಆರ್ಥಿಕ ಹೊರೆಯ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಲಿದ್ದು, ಬಳಿಕ ವೇತನ ಪರಿಷ್ಕರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

Transport Minister Lakshman Savadi Responding To The Revision Of Salaries Of Transport Workers

ಈಗಾಗಲೇ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಪರಿಷ್ಕರಣೆ ಬೇಡಿಕೆಯನ್ನೂ ಕೂಡ ಈ ವಾರವೇ ನಿರ್ಧರಿಸಲಾಗುವುದು. ಸಾರಿಗೆ ನೌಕರರು ಏಪ್ರಿಲ್ 7 ರಂದು ಕೈಗೊಂಡ ಮುಷ್ಕರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

Recommended Video

U T Khadar ಚುನಾವಣೆಯ ಅರಿವನ್ನ ಮೂಡಿಸಿದ ಪರಿ ಇದು ! | Oneindia Kannada

ಮುಷ್ಕರದಿಂದ ವಿದ್ಯಾರ್ಥಿಗಳು, ಬಡ-ಮಧ್ಯಮ ವರ್ಗದ ಜನರಿಗೆ ಸಮಸ್ಯೆಯಾಗುತ್ತದೆ. ಕೊರೊನಾದ ಆರ್ಥಿಕ ಸಂಕಷ್ಟದ ನಡುವೆಯೂ ನೌಕರರ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ವೇತನ ಸೌಲಭ್ಯವನ್ನು ನೀಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

English summary
Transport Minister and Deputy Chief Minister Lakshman Savadi reacted about the revision of the salaries of transport workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X