ಒಬ್ಬ ಸೋಂಕಿತನ ಚಿಕಿತ್ಸೆಗೆ ಸರ್ಕಾರಕ್ಕೆ ಎಷ್ಟು ಖರ್ಚಾಗಲಿದೆ?
ಬೆಂಗಳೂರು, ಮೇ 8: ಇಂದು ಫೇಸ್ ಬುಕ್ ಲೈವ್ ಬಂದಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊರೊನಾ ಚಿಕಿತ್ಸೆ ಬಗೆಗಿನ ಪ್ರಮುಖ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಒಬ್ಬ ಸೋಂಕಿತನ ಚಿಕಿತ್ಸೆಗೆ ಸರ್ಕಾರಕ್ಕೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಯ ಹಣವನ್ನು ಸರ್ಕಾರವೇ ಬರಿಸುತ್ತಿದೆ. ಒಬ್ಬ ಸೋಂಕಿತನಿಗೆ ಚಿಕಿತ್ಸೆ ನೀಡಲು ಸರ್ಕಾರ 3.5 ಲಕ್ಷ ರೂಪಾಯಿ ಖರ್ಚು ಮಾಡುತ್ತಿದೆ. ಕರ್ನಾಟಕದಲ್ಲಿಯೂ ಸೋಂಕಿತನ ಚಿಕಿತ್ಸೆಗೆ ಹಣವನ್ನು ಸರ್ಕಾರವೇ ನೀಡುತ್ತಿದೆ.
ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ಒಬ್ಬ ಕೊರೊನಾ ಸೋಂಕಿತನ ಚಿಕಿತ್ಸೆಗೆ 3,48,885 ರೂಪಾಯಿ ಖರ್ಚಾಗುತ್ತಿದೆ. ಇದುವರೆಗೆ 136 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಇದುವರೆಗೆ ಕೊರೊನಾ ಚಿಕಿತ್ಸೆಗಾಗಿ 4.74 ಕೋಟಿ ರೂಪಾಯಿ ಖರ್ಚಾಗಿದೆ ಸುರೇಶ್ ಕುಮಾರ್ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವೈದ್ಯಕೀಯ ಕಾಲೇಜಿನ ರೀತಿ ಸೇಂಟ್ ಜಾನ್ಸ್ ಆಸ್ಪತ್ರೆಯಿಂದಲೂ ಕೊರೊನಾ ಚಿಕಿತ್ಸಾ ವೆಚ್ಚ ಕುರಿತು ಮಾಹಿತಿ ಕೇಳಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಅಂದಹಾಗೆ, ಕರ್ನಾಟಕದಲ್ಲಿ ಇಂದು 48 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 753 ಏರಿಕೆಯಾಗಿದೆ.












Click it and Unblock the Notifications