ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟ್ರಿನಿಟಿ ವೃತ್ತ ಮೆಟ್ರೋ ಪಿಲ್ಲರ್ ಸುರಕ್ಷಿತವಾಗಿದೆ ಆತಂಕ ಬೇಡ

|
Google Oneindia Kannada News

ಬೆಂಗಳೂರು, ಜನವರಿ 23: ಮೈಸೂರು ರಸ್ತೆ-ಬೈಯಪ್ಪನಹಳ್ಳಿ ನೇರಳೆ ಮಾರ್ಗದ ಟ್ರಿನಿಟಿ ನಮ್ಮ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ ಪಿಲ್ಲರ್ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಲ್ಕತ್ತ ಫ್ಲೈಓವರ್ ದುರಂತ ಮಾದರಿ ಬೆಂಗಳೂರಲ್ಲೂ ಆಗ್ತಿತ್ತು: ಸಾರಿಗೆ ತಜ್ಞ ಶ್ರೀಹರಿ ಕೊಲ್ಕತ್ತ ಫ್ಲೈಓವರ್ ದುರಂತ ಮಾದರಿ ಬೆಂಗಳೂರಲ್ಲೂ ಆಗ್ತಿತ್ತು: ಸಾರಿಗೆ ತಜ್ಞ ಶ್ರೀಹರಿ

ಕಂಬದ ಕೆಳಗಿನ ಆಧಾರವನ್ನು ಇದೇ ವಾರದಲ್ಲಿ ತೆಗೆಯಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಕಂಬದ ವಯಾಡಕ್ಟ್‌ನ ಬೀಮ್‌ನಲ್ಲಿ ಕಾಂಕ್ರೀಟ್ ಶಿಥಿಲಗೊಂಡಿದ್ದರಿಂದ ಡಿ.12ರಂದು ದುರಸ್ತಿ ಕಾರ್ಯ ಆರಂಭಿಸಲಾಗಿತ್ತು. ದುರಸ್ತಿ ಕಾರ್ಯ ಹಿನ್ನೆಲೆ ಎಂಜಿ ರಸ್ತೆಯಿಂದ ಇಂದಿರಾನಗರದ ವರೆಗೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಹನಿಕೊಂಬ್ ಆತಂಕದ ಬಳಿಕ ನಮ್ಮ ಮೆಟ್ರೋ ಸೇವೆ ಹೇಗಿದೆ? ಹನಿಕೊಂಬ್ ಆತಂಕದ ಬಳಿಕ ನಮ್ಮ ಮೆಟ್ರೋ ಸೇವೆ ಹೇಗಿದೆ?

ಆ ವೇಳೆ ಎಂಜಿ ರಸ್ತೆಯಿಂದ ಇಂದಿರಾನಗರದವರೆಗೆ ಬಿಎಂಟಿಸಿ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಕಾಮಗಾರಿ ಮುಗಿದ ದಿನದಿಂದ ಇದುವರೆಗೆ ಕಂಬ, ವಯಾಡಕ್ಟ್‌ನ ನಿರ್ವಹಣೆ ಕಾರ್ಯ ನಡೆದಿದೆ. ಬೀಮ್‌ನಲ್ಲಿ ಕಾಂಕ್ರೀಟ್ ಸಮರ್ಪಕವಾಗಿದ್ದು, ಇನ್ನು ಯಾವುದೇ ಅಪಾಯವಿಲ್ಲ ಎಂದು ದೃಢಪಟ್ಟಿದೆ.

Trinity circle metro pillars are safe

155ನೇ ಸಂಖ್ಯೆಯ ಕಂಬದ ವಯಾಡಕ್ಟ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡ ಬಳಿಕ ಎಲ್ಲಾ ಕಂಬ, ವಯಾಡಕ್ಟ್‌ ಪರಿಶೀಲನೆ ನಡೆಸುವಂತೆ ಸಿದ್ಧತೆ ನಡೆಸಿದ್ದಾರೆ. ಎಲ್ಲಾ ಮಾರ್ಗಗಳಲ್ಲಿ ಗುಣಮಟ್ಟ ತಪಾಸಣೆ ನಡೆಸಬೇಕೆಂಬ ಸರ್ಕಾರ ಸೂಚನೆಯನ್ನು ನೀಡಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕಂಬಕ್ಕೆ 32 ಸೆನ್ಸರ್‌ಗಳನ್ನು ಅಳವಡಿಸಿ ಒಂದು ತಿಂಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಕಂಬವು ಒತ್ತಡವನ್ನು ತಡೆದುಕೊಳ್ಳುವ ಸಾಮರ್ಥ್ಯವಿದೆ ಎಂದು ಅವರು ಕೂಡ ಸ್ಪಷ್ಟಪಡಿಸಿದ್ದಾರೆ.

English summary
BMRCL clarified that Trinity circle Namma metro pillar are safe and it has been validated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X