ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧಕ್ಕೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಆಗಮನ

|
Google Oneindia Kannada News

Recommended Video

ಬೆಂಗಳೂರಿಗೆ ಬಂದು ಎಲ್ಲ ಕೈ ಶಾಸಕರ ಜತೆ ಮಾತಾಡ್ತೀನಿ ಎಂದ ಡಿಕೆಶಿ | Oneindia Kannada

ಬೆಂಗಳೂರು, ಜುಲೈ 6: ಹದಿಮೂರಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಅವರ ಮನವೊಲಿಸಲು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಮುಂದಾಗಿದ್ದು, ವಿಧಾನಸೌಧಕ್ಕೆ ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Trouble shooter DK shivakumar arrives Vidhana Soudha

ಯದ್ಧ ರಂಗಕ್ಕೆ ಬಂದು ನಿಂತಿರಬೇಕಿದ್ದರೆ ಶಾಂತಿ ಮಾತುಕತೆಗೆ ವಾಪಸ್ ಹೋಗೋಣವೆಂದರೆ ಯಾರು ಕೇಳುತ್ತಾರೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

ಡಿಕೆ ಶಿವಕುಮಾರ್ ಶಾಸಕರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಎಲ್ಲಾ ಶಾಸಕರ ರಾಜೀನಾಮೆಗೆ ಬಲವಾದ ಕಾರಣ ಇದ್ದೇ ಇರುತ್ತದೆ.

ಆದರೆ ಈ ಹಿಂದೆಯೂ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ರಾಜೀನಾಮೆ ನೀಡಲು ಮುಂದಾಗಿದ್ದಾಗ, ಇದೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿ ಅವರ ಮನವೊಲಿಸಲು ಯಶಸ್ವಿಯಾಗಿದ್ದರು.

ಆದರೆ ಸಿಎಂ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷರು ವಿದೇಶದಲ್ಲಿರುವುದರಿಂದ ಡಿಕೆ ಶಿವಕುಮಾರ್ ತಮ್ಮ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಶಾಸಕರ ಮನವೊಲಿಸಲು ಮುಂದಾಗಿದ್ದಾರೆ.

ಆದರೆ ಶಾಸಕರು ವಿಧಾನ ಸೌಧಕ್ಕೆ ಆಗಮಿಸುವ ಮುನ್ನ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಬಳಿ ಮಾತನಾಡಿ ಯಾರೂ ರಾಜೀನಾಮೆ ನೀಡುತ್ತಿಲ್ಲ, ನೀವು ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ದೂರಿದ್ದರು. ಆದರೆ ಅವರೇ ಈಗ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಆದರೆ ಸ್ಪೀಕರ್ ಅವರು ತಮ್ಮ ಸಂಬಂಧಿಗೆ ಆರೋಗ್ಯ ಸರಿ ಇಲ್ಲವೆಂದು ಜಯದೇವ ಆಸ್ಪತ್ರೆಗೆ ತೆರಳಿದ್ದು, ವಿಧಾನಸೌಧದಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸುಮಾರು 20 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಶಿಡ್ಲಘಟ್ಟ ಶಾಸಕ ವಿ ಮುನಿಯಪ್ಪ, ಬಂಗಾರಪೇಟೆ ನಾರಾಯಣಸ್ವಾಮಿ. ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್, ಕೋಲಾರ ಶಾಸಕ ಶ್ರೀನಿವಾಸ ಗೌಡ, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರ ಹೆಸರು ಕೇಳಿಬರುತ್ತಿದೆ.

ನಾನು ಪಕ್ಷದ ಪರವಾಗಿ ಬಂದಿದ್ದೇನೆ. ನನ್ನ ಕೈಯಲ್ಲಿ ರಾಜೀನಾಮೆ ಪತ್ರವಿಲ್ಲ- ಎಸ್. ಟಿ ಸೋಮಶೇಖರ್ ಹೇಳಿದ್ದಾರೆ.

ಬಂಡಾಯ ಶಾಸಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕಂಪ್ಲಿ ಶಾಸಕ ಗಣೇಶ್‌ ಮತ್ತು ಹೊಸಕೋಟೆ ಎಂಟಿಬಿ ನಾಗರಾಜ್ ಅವರೂ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಬಿಸಿ ಪಾಟೀಲ್, ಶಿವರಾಂ ಹೆಬ್ಬಾರ್, ರಮೇಶ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾರಾಯಣಗೌಡ, ಎಚ್ ವಿಶ್ವನಾಥ್, ಕೆ. ಗೋಪಾಲಯ್ಯ, ಮುನಿರತ್ನ, ಪ್ರತಾಪ್ ಗೌಡ ಪಾಟೀಲ್, ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಬರುವಷ್ಟರಲ್ಲಿ 12 ಮಂದಿ ಶಾಸಕರು ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರ ಹರಿದುಹಾಕಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

English summary
DK Shivakumar Arrives Vidhan Soudha After 13 MLAs Submit their resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X