ನೆಲಮಂಗಲದ ಬಳಿಯ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿ, ವಾಹನ ಸವಾರರ ಪರದಾಟ
Tumkuru-Bengaluru National Highway: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಲಿವೆ. ಇದೀಗ ನೆಲಮಂಗಲದ ಬಳಿಯ ತುಮಕೂರು-ಬೆಂಗಳೂರು ಹೆದ್ದಾರಿಲ್ಲಿ 4ರಲ್ಲಿ ಲಾರಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ನಡೆದಿದ್ದು, ಪರಿಣಾಮ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದ್ದಾರೆ. ಹಾಗಾದ್ರೆ ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಾಲಕನ ನಿಯಂತ್ರಣ ತಪ್ಪಿ ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪರದಾಡಿದ ವಾಹನ ಸವಾರರು
ಅಪಾಯಕಾರಿ ಕ್ಲೋರೈಡ್ ಕೆಮಿಕಲ್ ಸೋರಿಕೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ಸಂಚಾರಿ ಪೊಲೀಸರು ಭೇಟಿ ನೀಡಿ ಲಾರಿ ತೆರವಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮತ್ತೊಂದೆಡೆ ಈ ಘಟನೆ ಹಿನ್ನೆಲೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


Click it and Unblock the Notifications
