ತುಮಕೂರು ರಸ್ತೆಗೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಬಿಬಿಎಂಪಿ ನಿರ್ಧಾರ
ಬೆಂಗಳೂರು, ಜನವರಿ 21: ತುಮಕೂರು ರಸ್ತೆಗೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಬಿಬಿಎಂಪಿ ತೀರ್ಮಾನಿಸಿದೆ.
ತುಮಕೂರು ರಸ್ತೆಯ ಎರಡು ಭಾಗದಲ್ಲಿ ಸಿದ್ದಗಂಗಾ ಶ್ರೀಗಳ ಹೆಸರಿಡಲು ಬಿಬಿಎಂಪಿ ತೀರ್ಮಾನಿಸಿದೆ. ಯಶವಂತಪುರ ವೃತ್ತದಿಂದ (ಸಂವಿಧಾನ ವೃತ್ತ) ಕೆನ್ನಮೆಟಲ್ ಕಾರ್ಖಾನೆವರೆಗೆ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಗಳ ರಸ್ತೆ' ಹಾಗೂ ಗೊರಗುಂಟೆ ಪಾಳ್ಯದಿಂದ ಶುರುವಾಗಿ ಕೆನ್ನಮೆಟಲ್ ಕಾರ್ಖಾನೆಯ ಬಳಿ ಕೊನೆಗೊಳ್ಳುವ ಮೇಲುಸೇತುವೆಗೆ ಡಾ. ಶಿವಕುಮಾರ ಮಹಾ ಸ್ವಾಮೀಜಿಗಳ ಮೇಲುಸೇತುವೆ' ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿತ್ತು, ಅಧಿಕೃತವಾಗಿ ಘೋಷಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ಅವರ ಅಂತ್ಯಕ್ರಿಯೆ ಜನವರಿ 22 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಎಲ್ಲಾ ಸರ್ಕಾರಿ ಶಾಲಾ, ಕಾಲೇಜುಗಳಿಗೂ ಮಂಗಳವಾರ ರಜೆ ಘೋಷಿಸಲಾಗಿದೆ.












Click it and Unblock the Notifications