ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರಿಗೆ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪತ್ರಕರ್ತನಿಗೆ 4 ದಿನ ನ್ಯಾಯಾಂಗ ಬಂಧನ

|
Google Oneindia Kannada News

ಬೆಂಗಳೂರು, ಮಾರ್ಚ್ 22: ವೈದ್ಯರ ಬಳಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನನ್ನು ಬಂಧಿಸಿದ ಸದಾಶಿವನಗರ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಪಬ್ಲಿಕ್ ಟಿವಿಯಲ್ಲಿ ಇನ್ ಪುಟ್ ಚೀಫ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಹಕಾರನಗರ ನಿವಾಸಿ ಪತ್ರಕರ್ತ ಹೇಮಂತ್ ಕಶ್ಯಪ್, ನಗರದ ಖ್ಯಾತ ವೈದ್ಯ ಡಾ ರಮಣ ರಾವ್ ಎಂಬುವವರಿಗೆ ಬೆದರಿಕೆಯೊಡ್ಡಿ 50 ಲಕ್ಷ ರೂಪಾಯಿ ನೀಡುವಂತೆ ಪೀಡಿಸಿದ್ದ ಎಂಬ ನಿಖರ ದೂರಿನ ಮೇಲೆ ಕಳೆದ ಮಂಗಳವಾರ ಸಂಜೆ ಪೊಲೀಸರು ಬಂಧಿಸಿದ್ದರು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಈ ಮೊದಲು ವಿಡಿಯೋ ಒಂದನ್ನು ಮುಂದಿಟ್ಟುಕೊಂಡು ಹೇಮಂತ್ ಹಾಗೂ ಅವನ ಸ್ನೇಹಿತರು ಸಾಕಷ್ಟು ಹಣ ದೋಚಿದ್ದರು. ಈತ ಕೂಡ 5 ಲಕ್ಷ ಹಣ ಪಡೆದಿದ್ದ. ಬಳಿಕ 50 ಲಕ್ಷಕ್ಕೆ ಬೇಡಿಕೆ ಇಟ್ಟಾಗ ವೈದ್ಯ ರಮಣ್ ಅವರು ಪೊಲೀಸರಿಗೆ ದೂರು ನೀಡಿದ್ದರು.

TV journalist arrested on blackmailing charge

ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಸಮಯ ಸುದ್ದಿ ವಾಹಿನಿಯ ಇನ್ ಪುಟ್ ಚೀಫ್ ಬೂಕನಕೆರೆ ಮಂಜುನಾಥ್ ಮತ್ತು ಕ್ಯಾಮರಾಮ್ಯಾನ್ ಮುರಳಿ ತಲೆಮರೆಸಿಕೊಂಡಿದ್ದು ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಡಿ ದೇವರಾಜ್ ತಿಳಿಸಿದ್ದಾರೆ.

ಪ್ರಕರಣವೇನು? ಬೆಂಗಳೂರು ಮಾಧ್ಯಮ ಲೋಕದ ಅಪರಾಧ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಪತ್ರಕರ್ತ ಹೇಮಂತ್ ಕಶ್ಯಪ್ ಸದಾಶಿವನಗರದ ವೈದ್ಯ ಡಾ ರಮಣ ರಾವ್ ಅವರಿಗೆ ಕಳೆದ ಮಾರ್ಚ್ 5ರಂದು ಕರೆ ಮಾಡಿ ತಮ್ಮಲ್ಲಿ ಮುಖ್ಯವಾದ ವಿಷಯ ಮಾತನಾಡುವುದಿದೆ ಎಂದಿದ್ದಾನೆ, ಅದಕ್ಕೆ ವೈದ್ಯರು ಕ್ಲಿನಿಕ್ ಗೆ ಬರುವಂತೆ ಸೂಚಿಸಿದರು.

ವೈದ್ಯರಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಸಿಬ್ಬಂದಿಯನ್ನು ವಜಾಗೊಳಿಸಿದ ಪಬ್ಲಿಕ್ ಟಿವಿ ವೈದ್ಯರಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಸಿಬ್ಬಂದಿಯನ್ನು ವಜಾಗೊಳಿಸಿದ ಪಬ್ಲಿಕ್ ಟಿವಿ

ಅಲ್ಲಿ ಹೇಮಂತ್ ತಾನು ಟಿವಿ 9 ವಾಹಿನಿಯ ವರದಿಗಾರ ಎಂದು ಪರಿಚಯಿಸಿ, ನೀವು ಭಾಗಿಯಾಗಿರುವ ಖಾಸಗಿ ವಿಡಿಯೊವೊಂದು ನನ್ನ ಬಳಿಯಿದ್ದು ಹಣ ಕೊಟ್ಟರೆ ಪ್ರಕರಣವನ್ನು ಇಲ್ಲಿಗೇ ಮುಚ್ಚಿ ಹಾಕುತ್ತೇನೆ, ಇಲ್ಲದಿದ್ದರೆ ಎಲ್ಲಾ ವಾಹಿನಿಗಳಿಗಲ್ಲಿಯೂ ಪ್ರಸಾರವಾಗುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು.

ನನ್ನ ಸೇರಿ ಮತ್ತೆ 5 ಮಂದಿ ವರದಿಗಾರರಲ್ಲಿ ನಿಮಗೆ ಸಂಬಂಧಪಟ್ಟ ಖಾಸಗಿ ವಿಡಿಯೊ ಇದ್ದು ಪ್ರತಿಯೊಬ್ಬರಿಗೂ ತಲಾ 10 ಲಕ್ಷ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಪ್ರಸಾರ ಮಾಡಿಸುತ್ತೇವೆ ಎಂದು ಧಮಕಿ ಹಾಕಿದ್ದನು.

ಆತನ ಮಾತಿಗೆ ಕುಗ್ಗಿ ಹೋಗಿ ಡಾ ರಮಣ್ ರಾವ್ 5 ಲಕ್ಷ ರೂಪಾಯಿ ನೀಡಿ ಕಳುಹಿಸಿದ್ದರು. ನಂತರ ಕಳೆದ ಮಂಗಳವಾರ ಸಂಜೆ ಸಮಯ ಟಿವಿಯ ಮಂಜುನಾಥ್ ಮತ್ತು ಛಾಯಾಗ್ರಹಕ ತಮ್ಮ ಸಂಸ್ಥೆಯ ಲೋಗೋ ಹಿಡಿದುಕೊಂಡು ಬಂದು ಅದೇ ವಿಡಿಯೊ ತಮ್ಮ ಬಳಿ ಕೂಡ ಇದೆ ಎಂದು ಬೆದರಿಕೆ ಹಾಕಿದ್ದರು.

ಆದರೆ ರಮಣ್ ರಾವ್ ಹಣ ನೀಡಲಿಲ್ಲ. ಒಂದೇ ವಿಷಯದಲ್ಲಿ ಇಬ್ಬಿಬ್ಬರು ಪತ್ರಕರ್ತರು ಬಂದು ತಮಗೆ ಬೆದರಿಕೆ ಹಾಕುತ್ತಿರುವುದು ನೋಡಿ ಸಂಶಯ ಬಂದು ರಮಣ್ ರಾವ್ ವಾಪಸ್ ಕಳುಹಿಸಿದರು.

ಇನ್ನೊಂದು 5 ಲಕ್ಷ ತೆಗೆದುಕೊಂಡು ಹೋಗಿದ್ದ ಕಶ್ಯಪ್ ಅಷ್ಟಕ್ಕೇ ಸುಮ್ಮನಾಗಲಿಲ್ಲ. ಮತ್ತೆ ಹಣದ ಬೇಡಿಕೆಯಿಟ್ಟಿದ್ದ. ಮತ್ತೆ ಕ್ಲಿನಿಕ್ ಗೆ ಬರುತ್ತೇನೆ, ಹಣ ನೀಡಿ ಎಂದು ಬೆದರಿಕೆ ಹಾಕಿದ್ದ. ಇದೇ ಸಂದರ್ಭದಲ್ಲಿ ವೈದ್ಯರು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದರು.

ಅವರು ಸದಾಶಿವನಗರ ಪೊಲೀಸರಿಗೆ ಮಾಹಿತಿ ನೀಡಿ ಪತ್ರಕರ್ತನನ್ನು ಬಂಧಿಸುವಂತೆ ಆದೇಶ ನೀಡಿದರು. ಹೇಮಂತ್ ಕಶ್ಯಪ್ ಕ್ಲಿನಿಕ್ ಗೆ ಬರುವ ವೇಳೆಗೆ ಪೊಲೀಸರ ತಂಡ ಮಫ್ತಿಯಲ್ಲಿ ಬಂದು ಹಣ ಪಡೆಯುತ್ತಿದ್ದಾಗ ಸ್ಥಳದಲ್ಲಿಯೇ ಬಂಧಿಸಿದರು.

ಆರೋಪಿ ಕಶ್ಯಪ್ ಬಳಿಯಿರುವ ವಿಡಿಯೊ ನಿಖರವಾಗಿರುವುದೇ ಅಥವಾ ನಕಲಿ ಸೃಷ್ಟಿಯೇ ಎಂದು ಪೊಲೀಸರು ಇನ್ನೂ ಪರಿಶೀಲನೆ ನಡೆಸಿಲ್ಲ.

English summary
A television journalist has been arrested for allegedly blackmailing a doctor and Padma Shri winner over a private video clip. On Wednesday, he was remanded in police custody for four days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X